Recent Posts

Saturday, April 25, 2026
ಸುದ್ದಿ

ಅತ್ತಿಬೆಲೆ ಪಟಾಕಿ ದುರಂತ; ಪಟಾಕಿ ತರಲು ಹೋಗಿದ್ದ ಬಾಡಿ ಬಿಲ್ಡರ್ ಸಾವು – ಕಹಳೆ ನ್ಯೂಸ್

ಅತ್ತಿಬೆಲೆ ಪಟಾಕಿ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೆಂಕಟೇಶ್ ಎಂಬವರು ಗುರುವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ವೆಂಕಟೇಶ್ ಸ್ನೇಹಿತನೊಂದಿಗೆ ಪಟಾಕಿ ಖರೀದಿಗೆ ಹೋಗಿದ್ದ ಸಂದರ್ಭದಲ್ಲಿ ಪಟಾಕಿ ದುರಂತ ಸಂಭವಿಸಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದುರಂತದಲ್ಲಿ ಅವರ ಸ್ನೇಹಿತ ಪಾರಾಗಿದ್ದು, ವೆಂಕಟೇಶ್ ಗೋದಾಮಿನ ಒಳಗೆ ಸಿಲುಕಿ ಹಾಕಿಕೊಂಡಿದ್ದರು. ಬೆನ್ನು, ತಲೆ, ಕೈ ಕಾಲುಗಳುಗಳಿಗೆ ಬೆಂಕಿ ತಗುಲಿ ಸುಟ್ಟ ಗಾಯಗಳಾಗಿದ್ದವು.

ಮೃತ ವೆಂಕಟೇಶ್ (25) ಬೆಂಗಳೂರು ನಗರ ಜಿಲ್ಲೆಯ ಗಾರೆ ಭಾವಿಪಾಳ್ಯದ ನಿವಾಸಿಯಾಗಿದ್ದು, ವೃತ್ತಿಯಲ್ಲಿ ಛಾಯಾಗ್ರಾಹಕರಾಗಿದ್ದ ಅವರು ಪ್ರವೃತ್ತಿಯಲ್ಲಿ ಬಾಡಿ ಬಿಲ್ಡರ್ ಆಗಿದ್ದರು. ಪರಿಚಯದವರ ಕಾರ್ಯಕ್ರಮಕ್ಕೆ ಪಟಾಕಿ ತರಲು ಅತ್ತಿಬೆಲೆಗೆ ಹೋಗಿದ್ದರು ಎನ್ನಲಾಗಿದೆ.