Thursday, April 30, 2026
ಸುದ್ದಿ

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಕುಕ್ಕೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾತನಾಡಿದ  ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಅವರು ಕರ್ನಾಟಕದ ವಿಧಾನ ಸಭಾ ಚುನಾವಣೆಯಲ್ಲಿ ಅನೀರಿಕ್ಷಿತ ಹಿನ್ನಡೆಯಾಗಿದೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆ ಅಸಾಧ್ಯ. ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರದಲ್ಲಿ ನಡೆಯುವ ಚುನಾವಣೆ. ನರೇಂದ್ರ ಮೋದಿ ನೇತೃತ್ವದ ಒಂಬತ್ತುವರೆ ವರ್ಷದ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಅವರಿಂದ ಅಭಿವೃದ್ಧಿಗೆ ಅರ್ಥ ಬಂದಿದೆ ಎಂದು ಹೇಳಿದರು.

ಬಿಜೆಪಿ ಪಕ್ಷ ನನಗೆ ಎಲ್ಲವನ್ನು ನೀಡಿದೆ. ಎಂಎಲ್ ಎ, ಎಂಪಿ, ಎಂಎಲ್ ಸಿ, ಮುಖ್ಯಮಂತ್ರಿ, ಕೇಂದ್ರ ಸಚಿವ ಸ್ಥಾನ, ರಾಜ್ಯ, ರಾಷ್ಟ್ರೀಯ ಹುದ್ದೆಗಳನ್ನು ನೀಡಿದೆ. ಇನ್ನು ನಾನು ಏನದರೂ ಪಕ್ಷಕ್ಕೆ ನೀಡುವುದು ಇರುವುದು. ಆದ್ದರಿಂದ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿ.ವಿ.ಸದಾನಂದ ಗೌಡ ಅವರು ಬುಧವಾರ ಸಂಜೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದರು. ಕ್ಷೇತ್ರದಲ್ಲಿ ಸರ್ಪಸಂಸ್ಕಾರ, ಆಶ್ಲೇಷ ಬಲಿ, ಮಹಾಭಿಷೇಕ ಸೇವೆ ನೆರವೇರಿಸಿದರು. ಪತ್ನಿ ಡಾಟಿ ಸದಾನಂದ ಗೌಡ, ಪುತ್ರ ಕಾರ್ತಿಕ್, ಅವರ ಪತ್ನಿ ಹಾಗೂ ಮನೆಯವರು ಜೊತೆಗಿದ್ದರು. ದೇವಳದ ವತಿಯಿಂದ ಡಿ.ವಿ.ಸದಾನಂದ ಗೌಡ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ಭಟ್, ಶೋಭಾ ಗಿರಿಧರ್, ಶ್ರೀಕುಮಾರ್ ಬಿಲದ್ವಾರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.