Thursday, April 30, 2026
ಸುದ್ದಿ

ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯೆ ತ್ರಿವೇಣಿ ಬಿಜೆಪಿಗೆ ಸೇರ್ಪಡೆ – ಕಹಳೆ ನ್ಯೂಸ್

ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲ ಕೃಷ್ಣ ರಾವ್, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.