ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾನಿಗಳು ನೀಡಿದ ಸೋಲಾರ್ ಪವರ್ ಸಿಸ್ಟಮ್ ಉದ್ಘಾಟಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ – ಕಹಳೆ ನ್ಯೂಸ್

ಕಾಪು : ಪೆರ್ಣಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೋಲಾರ್ ಸೆಲ್ಕೊ ಸಿಸ್ಟಮ್ ಕಂಪವಿ ಯವರು ಸಿ.ಎಸ್.ಆರ್ ಪಂಡ್ ನಿಂದ ನೀಡಲಾದ ಸೋಲಾರ್ ಪವರ್ ಸಿಸ್ಟಮ್ ಅನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್ ಮಡಿವಾಳ, ಸೋಲಾರ್ ಸೆಲ್ಕೊ ಸಿಸ್ಟಮ್ ನ ಸುರೇಶ್ ನಾಯಕ್, ಮಣಿಪಾಲ್ ಟೆಕ್ನಾಲಜಿಸ್ ರೊನೊಲ್ಡ್, ಗ್ರಾಮ ಪಂಚಾಯಿತ್ ಸದಸ್ಯರಾದ ಅರುಣ್ ಕುಮಾರ್, ರಾಮ ನಾಯ್ಕ, ಜಿಲ್ಲಾ ಆರೋಗ್ಯಾಧಿಕಾರಿಗಳಾದ ನಾಗಭೂಷಣ್ ಉಡುಪ, ತಾಲೂಕು ಆರೋಗ್ಯಾಧಿಕಾರಿಗಳಾದ ವಾಸುದೇವ್ ಉಪಾಧ್ಯಾಯ, ಪೆಣರ್ಂಕಿಲ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ರವೀಂದ್ರ ಬೋರ್ಕಾರ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.








