ವಸತಿ ಯೋಜನೆಯಡಿ ತಾಂತ್ರಿಕ ಕಾರಣಗಳಿಂದಾಗಿ ತಡೆಹಿಡಿದಿರುವ ಫಲಾನುಭವಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಸುಳ್ಯ ಶಾಸಕರಿಂದ ಮನವಿ – ಕಹಳೆ ನ್ಯೂಸ್

ಸುಳ್ಯ : ವಿವಿಧ ವಸತಿ ಯೋಜನೆಯಡಿ ಆಯ್ಕೆಯಾದ ಸುಳ್ಯ ಮತ್ತು ಕಡಬ ತಾಲೂಕಿನ ವ್ಯಾಪ್ತಿಯ ಫಲಾನುಭವಿಗಳ ಸಹಾಯಧನವನ್ನು ತಾಂತ್ರಿಕ ಕಾರಣದಿಂದಾಗಿ ನಿಗಮದಿಂದ ತಡೆ ಹಿಡಿಯಲಾಗಿದ್ದು ಸದರಿ ಸಮಸ್ಯೆಯನ್ನು ಬಗೆಹರಿಸಿ ಅನುದಾನವನ್ನು ಬಿಡುಗಡೆಗೊಳಿಸುವಂತೆ ಹಲವಾರು ಬಾರಿ ಕೋರಲಾಗಿದ್ದರು ನಿಗಮದ ವತಿಯಿಂದ ಸಮಸ್ಯೆಯನ್ನು ಇವರಿಗೂ ಬಗೆಹರಿಸಿರುವುದಿಲ್ಲ.
ಆದ್ದರಿಂದ ಸಮಸ್ಯೆಯನ್ನು ಪರಿಹರಿಸಿ ಫಲಾನುಭವಿಗಳಿಗೆ ಅನುದಾನ ಬಿಡುಗಡೆಗೊಳಿಸಬೇಕೆಂದು ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರವರು ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಇದರ ವ್ಯವಸ್ಥಾಪಕ ನಿರ್ದೇಶಕರಿಗೆ ಬೆಂಗಳೂರಿನಲ್ಲಿ ಮನವಿಯನ್ನು ಸಲ್ಲಿಸಿದರು.









