ವಿಜಯೇಂದ್ರ ಯಡಿಯೂರಪ್ಪಗೆ ದೀಪಾವಳಿ ಭರ್ಜರಿ ಗಿಫ್ಟ್ ; ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕ ಮಾಡಿದ ಹೈಕಮಾಂಡ್..! – ಕಹಳೆ ನ್ಯೂಸ್

ಬೆಂಗಳೂರು: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಬಿಜೆಪಿಯ ನೂತನ ರಾಜ್ಯ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ.
ಇದರೊಂದಿಗೆ, ಬಿಜೆಪಿಯ ರಾಜ್ಯ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕೊನೆಗೊಂಡಿದೆ. ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.











