Wednesday, March 18, 2026
ಸುದ್ದಿ

ವಿಕಸಿತ ಭಾರತ ಸಂಕಲ್ಪ ಯಾತ್ರೆ – ಕೆಮ್ಮಣ್ಣಿನಲ್ಲಿ ಸಚಿವೆ ಶೋಭಾ ಕರಂದ್ಲಾಜೆ ಚಾಲನೆ :ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ– ಕಹಳೆ ನ್ಯೂಸ್

ಭಾರತದಾದ್ಯಂತ ನ.15 ರಿಂದ ಜ.26ರವರೆಗೆ ನಡೆಯುತ್ತಿರುವ “ವಿಕಸಿತ ಭಾರತ ಸಂಕಲ್ಪ ಯಾತ್ರೆ”ಗೆ ಇಂದು ದಿನಾಂಕ 09-12-2023 ರಂದು ಕೆಮ್ಮಣ್ಣು ಗ್ರಾಮ ಪಂಚಾಯತ್ ಬಳಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮಗಳ ಇಲಾಖಾ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಸವಲತ್ತುಗಳನ್ನು ವಿತರಿಸಲಾಯಿತು. ಕೇಂದ್ರ ಸರ್ಕಾರದ 70ಕ್ಕೂ ಹೆಚ್ಚು ಯೋಜನೆಗಳ ಪೈಕಿ 17 ಯೋಜನೆಗಳ ಬಗ್ಗೆ ಜನರಿಗೆ ಮಾಹಿತಿಯನ್ನು ಒದಗಿಸುವುದು, ಈ ಯೋಜನೆಗಳನ್ನು ಕೊನೆಯ ಮೈಲಿಯವರೆಗೂ ಮುಟ್ಟಿಸುವುದು, ಈವರೆಗೆ ಪ್ರಯೋಜನ ಪಡೆಯದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸುವುದು ಈ ಯಾತ್ರೆಯ ಉದ್ದೇಶವಾಗಿದ್ದು, ಯಾತ್ರೆಯಲ್ಲಿ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ವಾಹನ ಉಡುಪಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಲಿದ್ದು, ಎಲ್ಇಡಿ ಪರದೆಯ ಮೂಲಕ ಯೋಜನೆಗಳ ಮಾಹಿತಿಯನ್ನು ನೀಡಲಾಗುವುದು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ವಿಧಾನ ಪರಿಷತ್ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ, ಬ್ಯಾಂಕಿನ ಪ್ರಬಂಧಕರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು