Wednesday, March 11, 2026
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ ಕೊರೋನಾ ಹೊಸ ತಳಿಗೆ ಇಬ್ಬರು ಸಾವು ; ರಾಜ್ಯದಲ್ಲಿ ಆರೋಗ್ಯ ಸಚಿವರ ತುರ್ತುಸಭೆ – ಕಹಳೆ ನ್ಯೂಸ್

ಬೆಂಗಳೂರು: ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೋನಾ ವಕ್ಕರಿಸುವಂತಿದೆ. ಮತ್ತೆ ಕೊರೋನಾ ಕೇಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೋನಾದ (Corona Virus) ಹೊಸ ಸಬ್ ವೇರಿಯಂಟ್ ಜೆಎನ್-1 (JN.1) ಭಾರತದಲ್ಲೂ ಇದೀಗ ಕಂಡುಬಂದಿದೆ.

ನೆರೆಯ ಕೇರಳದಲ್ಲಿ (Kerala) ಮೊದಲ ಕೇಸ್ ಪತ್ತೆಯಾಗಿದೆ. ಜೆಎನ್1 ಒಮಿಕ್ರಾನ್‍ನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕೂಡ ಕರೆಯಲಾಗುತ್ತೆ. ಇದು ಅಪಾಯಕಾರಿನಾ ಅಲ್ವಾ ಅನ್ನೋದು ಇನ್ನೂ ನಿರ್ಧಾರಿತವಾಗಿಲ್ಲ. ಆದರೆ ಶರವೇಗದಲ್ಲಿ ಹಬ್ಬುತ್ತಿದೆ. ಕೇರಳದ ಕಣ್ಣೂರಿನಲ್ಲಿ 80 ವರ್ಷದ ವೃದ್ಧರೊಬ್ಬರು ಕೋವಿಡ್‍ಗೆ ಬಲಿ ಆಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇದು ಕಳೆದ 2 ದಿನಗಳಲ್ಲಿ 2ನೇ ಸಾವಾಗಿರೋದು ಕಳವಳಕ್ಕೆ ಕಾರಣವಾಗಿದೆ. ಕಣ್ಣೂರಿನ ಪನೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ ಮಾಡಲಾಗಿದೆ. ಸಾರ್ವಜನಿಕ ಸಭೆ ಸಮಾರಂಭಗಳ ಮೇಲೆಯೂ ಹಲವು ನಿರ್ಬಂಧಗಳನ್ನು ಹೇರಲಾಗುತ್ತಿದೆ. ಈ ಬೆನ್ನಲ್ಲೇ ರಾಜ್ಯ ಸಕಾರವೂ ಅಲರ್ಟ್ ಆಗಿದೆ. ಆರೋಗ್ಯಮಂತ್ರಿ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸಿ, ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ. ಸದ್ಯಕ್ಕೆ ಆತಂಕ ಬೇಡ ಎಂದಿದ್ದಾರೆ

ಜಾಹೀರಾತು
ಜಾಹೀರಾತು