Wednesday, March 18, 2026
ಸುದ್ದಿ

ಸುಬ್ರಹ್ಮಣ್ಯದ ನೆಟ್ಟಣ ರೈಲ್ವೆ ಸ್ಟೇಷನ್‌ನಲ್ಲಿ ಅನಾಥ ಶವ ಪತ್ತೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯದ ನೆಟ್ಟಣ ರೈಲ್ವೆ ಸ್ಟೇಷನ್‌ನಲ್ಲಿ ಗಂಡಸಿನ ಶವವೊಂದು ಪತ್ತೆಯಾಗಿದೆ. ರೈಲ್ವೆ ಸ್ಟೇಷನ್‌ನಲ್ಲಿ ಅನಾಥವಾಗಿ ಬಿದ್ದಿದ್ದ ಯುವಕನನ್ನ ಪರಿಶೀಲಿಸಿದಾಗ ಸಾವನ್ನಪ್ಪಿರೋದು ತಿಳಿದುಬಂದಿದ್ದು, ಯುವಕನ ಮೃತದೇಹವನ್ನ ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಸಾವನ್ನಪ್ಪಿದ ಯುವಕನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

ಇನ್ನು ಸಾವನ್ನಪ್ಪಿದ ಯುವಕನ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡು ಬಂದಿಲ್ಲ. ಆದರೆ ಯಾವ ಕಾರಣದಿಂದ ಸಾವನ್ನಪ್ಪಿದ್ದಾನೆ ಅನ್ನೋದು ತನಿಖೆಯ ಬಳಿಕ ತಿಳಿಯಬೇಕಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಯುವಕನ ಮೃತದೇಹವನ್ನ ಶವಗಾರಕ್ಕೆ ರವಾನಿಸುವ ಸಂದರ್ಭದಲ್ಲಿ ಹಿಂದು ಮುಖಂಡರದ ಧನ್ಯಕುಮಾರ್ ಬೆಳಂದೂರು, ಜಯಂತ್ ಕುಂಜೂರು ಪಂಜ ಸಹಕರಿಸಿದ್ದಾರೆ.