Wednesday, May 22, 2024
ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಡಿಕೇರಿರಾಜ್ಯಸುದ್ದಿಸುಳ್ಯ

ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ, ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ ದ್ವಿಪಥ ಅಭಿವೃದ್ಧಿ ಒಟ್ಟು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 957.39 ಕೋಟಿ ರೂ. ವೆಚ್ಚದ 2 ಹೈವೇ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ – ಸಂಸದ ನಳಿನ್‌ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಕರ್ನಾಟಕದಿಂದ ಸಲ್ಲಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿ  ಪ್ರಸ್ತಾವನೆಗಳಲ್ಲಿ ಪ್ರಥಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 957.39 ಕೋಟಿ ರೂ. ವೆಚ್ಚದ ಎರಡು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿದೆ ಎಂದು ಸಂಸದ ನಳಿನ್‌ಕುಮಾರ್ ಕಟೀಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಉಜಿರೆ-ಧರ್ಮಸ್ಥಳ-ಪೆರಿಯಶಾಂತಿ 28.490 ಕಿ.ಮೀ.ದ್ವಿಪಥ ಅಭಿವೃದ್ಧಿ 613.65 ಕೋಟಿ ರೂ. ವೆಚ್ಚದ ಯೋಜನೆ ಹಾಗೂ ರಾಷ್ಟ್ರೀಯ ಹೆದ್ದಾರಿ 73 ರ ಚಾರ್ಮಾಡಿ ಘಾಟಿಯಲ್ಲಿ ಮಂಗಳೂರು-ಮೂಡಿಗೆರೆ-ತುಮಕೂರು  ಸೆಕ್ಷನ್‌ನಲ್ಲಿ 11.20 ಕಿ.ಮೀ. ಅಭಿವೃದ್ದಿ 343.73 ಕೋಟಿ ರೂ. ವೆಚ್ಚದ ಯೋಜನೆಗೆ ಕೇಂದ್ರ ಭೂಸಾರಿಗೆ ಮಂತ್ರಾಲಯ ಅನುಮೋದನೆ ನೀಡಿದ್ದು ಟೆಂಡರ್ ಆಹ್ವಾನಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಮಾಣಿ – ಮೈಸೂರು  ರಸ್ತೆ ಚತುಷ್ಪಥ ಕಾಮಗಾರಿ (ಒಟ್ಟು 71.60 ಕಿ.ಮೀ)ಯ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಕರೆಯಲಾಗಿದೆ. ಕಾಮಗಾರಿಗೆ 1,000 ಕೋಟಿ ರೂ. ಅಧಿಕ ವೆಚ್ಚ ಎಂದು ಅಂದಾಜಿಸಲಾಗಿದ್ದು, ಸಮಗ್ರ ಯೋಜನಾ ವರದಿ ಬಳಿಕ ನಿಖರ ವೆಚ್ಚ ತಿಳಿಯಬಹುದೆಂದು ಸಂಸದರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು