Recent Posts

Saturday, April 25, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಬಿಡುಗಡೆಯಾದ 5 ಲಕ್ಷ ಸಹಾಯಧನದ ಡಿಡಿ ಹಸ್ತಾಂತರ – ಕಹಳೆನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬಂಟ್ವಾಳ ತಾಲೂಕು ವ್ಯಾಪ್ತಿಗೆ ಒಳಪಡುವ ರಾಯಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಿಡುಗಡೆಯಾದ 5ಲಕ್ಷ ಸಹಾಯಧನದ ಡಿಡಿಯನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರಾಯಿ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಶ್ಮಿತ್ ಶೆಟ್ಟಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕ್ ಯೋಜನಾಧಿಕಾರಿ ಮಾದವ ಗೌಡ, ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಸದಾನಂದ ಗೌಡ, ಹಾಗೂ ಚಂದ್ರಶೇಖರ ಗೌಡ, ಜನಜಾಗೃತಿ ಅಧ್ಯಕ್ಷರಾದ ಸದಾನಂದ ಶೀತಲ್, ವಲಯ ಮೇಲ್ವಿಚಾರಕ ಶಿವರಂಜನ್, ಒಕ್ಕೂಟದ ಅಧ್ಯಕ್ಷ ಪರಮೇಶ್ವರ್. ಊರಿನ ಪ್ರಮುಖರಾದ ಜಗದೀಶ್ ಕೊಯ್ಲಾ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಧರ್ಮರಾಜ್,ಸೇವಾ ಪ್ರತಿನಿಧಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು