Monday, April 27, 2026
ಉಡುಪಿರಾಜಕೀಯಸುದ್ದಿ

2023-24ನೇ ಸಾಲಿನ ವೃತ್ತಿಪರ ಯೋಜನೆಯಡಿ ಉಚಿತ ಉಪಕರಣ ವಿತರಣೆ ಹಾಗೂ ಮಾಹಿತಿ ಕಾರ್ಯಾಗಾರ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ – ಕಹಳೆ ನ್ಯೂಸ್

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಪಂಚಾಯತ್, ಉಡುಪಿ ಉಪ ನಿರ್ದೇಶಕರು (ಗ್ರಾಮಾಂತರ ಕೈಗಾರಿಕೆ), ಜಿ.ಪಂ. ಉಡುಪಿ ಇವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ “2023-24ನೇ ಸಾಲಿನ ವೃತ್ತಿಪರ ಯೋಜನೆಯಡಿಯಲ್ಲಿ ಉಚಿತ ಉಪಕರಣ ವಿತರಣಾ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಫಲಾನುಭವಿಗಳಿಗೆ ಸಾಂಕೇತಿಕವಾಗಿ ಉಚಿತ ಉಪಕರಣಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ರಾಜು ಮೋಗವೀರ, ಗ್ರಾಮಾಂತರ ಕೈಗಾರಿಕೆ ಇಲಾಖೆಯ ವಾಮನ ಉಪಸ್ಥಿತರಿದ್ದರು.