Thursday, March 12, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಜ.31ರಂದು (ನಾಳೆ) ಶ್ರೀವಿದ್ಯಾಗಣಪತಿ ದೇವರಿಗೆ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ : ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಜ.31ರಂದು ಶ್ರೀ ವಿದ್ಯಾಗಣಪತಿ ದೇವರಿಗೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ.

ಮಧ್ಯಾಹ್ನ 12.20ರ ಅಭಿಜಿತ್ ಲಗ್ನ ಸುಮುಹೂರ್ತದಲ್ಲಿ ಅವಧೂತ ಶ್ರೀ ವಿನಯ ಗುರೂಜಿ ಗೌರಿಗದ್ದೆಯವರ ದಿವ್ಯ ಹಸ್ತದಲ್ಲಿ ಶ್ರೀ ವಿದ್ಯಾಗಣಪತಿ ದೇವರಿಗೆ ಶಿಲಾನ್ಯಾಸ ಕಾರ್ಯಕ್ರಮ ನೇರವೇರಿಸಿ, ಆಶೀರ್ವಚನ ನೀಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಶ್ರೀ ರಾಮಾಂಜನೇಯ ಸೇವಾ ಟ್ರಸ್ಟ್(ರಿ)ನ ಅಧ್ಯಕ್ಷರಾದ ಡಾ | ಪ್ರಭಾಕರ್ ಭಟ್ ಕಲ್ಲಡ್ಕ ಅವರ ಅಧ್ಯಕ್ಷತೆಯಲ್ಲಿ ಕಲ್ಲಡ್ಕ ಶ್ರೀರಾಮ ಮಂದಿರದ ಮಾಧವ ಸಭಾಭವನದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ವಿಧಾನಪರಿಷತ್ ನ ಪ್ರತಿಪಕ್ಷ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಬೆಂಗಳೂರಿನ ಎಂ.ಆರ್.ಜಿ.ಗ್ರೂಪ್ ನ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ, ಮಾಜಿ ಸಚಿವ ಕೃಷ್ಣ ಜೆ.ಪಾಲೆಮಾರ್, ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಉದ್ಯಮಿ ಸಂತೋμï ಜಿ.ಶೆಟ್ಟಿ ದಲಂದಿಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಭಾಗವಹಿಸುವಂತೆ ಶತಾಬ್ದಿ ಸಂಭ್ರಮ ಸಮಿತಿಯ ಅಧ್ಯಕ್ಷರು ಹಾಗೂ ಸರ್ವಸದಸ್ಯರು ವಿನಂತಿಸಿಕೊಂಡಿದ್ದಾರೆ.