Thursday, May 14, 2026
ಬೆಂಗಳೂರು

ಜಯದೇವ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ‌ ಡಾ. ರವೀಂದ್ರನಾಥ ನೇಮಕ – ಕಹಳೆ ನ್ಯೂಸ್

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್ ಮಂಜುನಾಥ್ ಅವರ ಸೇವಾವಧಿ ಮುಗಿದಿದ್ದು, ನಿವೃತ್ತಿ ಹೊಂದಿದ್ದಾರೆ.

ಈ ಹಿನ್ನಲೆಯಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ.ರವೀಂದ್ರನಾಥ್ ಅವರನ್ನು ನೇಮಕ ಮಾಡಲಾಗಿದೆ. ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿದ್ದ ಡಾ.ಸಿ.ಎನ್‌.ಮಂಜುನಾಥ್‌ ಅವರ ಅವಧಿ ಇಂದಿಗೆ (ಜ.31) ಮುಕ್ತಾಯವಾಗಿದೆ. ಈಗಾಗಲೇ ಡಾ.ಮಂಜುನಾಥ್‌ ಅವರ ಸೇವಾವಧಿಯನ್ನು ನಾಲ್ಕು ಬಾರಿ ವಿಸ್ತರಿಸಲಾಗಿದ್ದು, ಈ ಬಾರಿ ಹೊಸ ನಿರ್ದೇಶಕರನ್ನು ನೇಮಕ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಜಯದೇವ ಆಸ್ಪತ್ರೆಗೆ ಪೂರ್ಣವಧಿ ನಿರ್ದೇಶರನ್ನು ನೇಮಕ ಮಾಡುವ ಮುನ್ನ ರಾಜ್ಯ ಸರ್ಕಾರ ಸದ್ಯಕ್ಕೆ ಡಾ.ರವೀಂದ್ರನಾಥ್ ಅವರನ್ನು ಪ್ರಬಾರ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.