Monday, June 3, 2024
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

‘ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ; ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು \ಬೆಳ್ತಂಗಡಿ, ಫೆ 06 : ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು

ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿಯವರು ನಳಿನ್ ಕುಮಾರ್ ಕಟೀಲ್ ರವರಿಗೆ ಪತ್ರ ಬರೆದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು 2023-24ನೇ ಸಾಲಿನ ವಾರ್ಷಿಕ ಯೋಜನೆಯಡಿಯಲ್ಲಿ ಸುಮಾರು ರೂ. 343.74 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ರಸ್ತೆ ಬಳಕೆದಾರರಿಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು