Monday, April 27, 2026
ದಕ್ಷಿಣ ಕನ್ನಡ

ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಪದ್ಮನಾಭ ನರಿಂಗಾನ ನಿಧನ – ಕಹಳೆ ನ್ಯೂಸ್

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಮುಖಂಡ, ಅಹಿಂದ ನಾಯಕ , ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಾಮಾಜಿಕ ಕಾರ್ಯಕರ್ತ ಪದ್ಮನಾಭ ನರಿಂಗಾನ(78) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಎಸ್.ಸಿ.ಘಟಕದ ಕಾಂಗ್ರೇಸ್ ಜಿಲ್ಲಾಧ್ಯಕ್ಷರಾಗಿ, ಅಕ್ರಮಸಕ್ರಮ ಸಮಿತಿಸದಸ್ಯರಾಗಿ ಕಾಂಗ್ರೆಸ್ ಪಕ್ಷದ ಅನೇಕ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ, ಓರ್ವ ಸ್ನೇಹಜೀವಿ ನಾಯಕರಾಗಿ ಗುರುತಿಸಿಕೊಂಡವರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಶಿಷ್ಟ ಜಾತಿ ಪಂಗಡದ ಸಮುದಾಯದ ಏಳಿಗೆಗೆ ಅನೇಕ ಹೋರಾಟವನ್ನು ಮಾಡಿ ಸಮಸ್ಯೆಗಳ ಪರಿಹಾರ ಮಾಡಿದ ಹೆಗ್ಗಳಿಕೆ ಇವರದು. ಸಮಾಜಸೇವೆಯ ಮೂಲಕ ಯಾರೊಂದಿಗೂ ವಿರೋಧ ಕಟ್ಟಿಕೊಳ್ಳದೆ ,ಉತ್ತಮ ಜನಪ್ರಗತಿ ನಿಧಿಯಾಗಿಯೂ ಹೆಸರು ಮಾಡಿದವರು.

ಇವರನ್ನು ಕಳೆದುಕೊಂಡ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್,ಮಾಜಿ ಸಚಿವ ಬಿ.ರಮಾನಾಥ ರೈ, ಸಹಿತ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.