Thursday, March 12, 2026
ದಕ್ಷಿಣ ಕನ್ನಡಸುದ್ದಿ

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಶ್ರೀ ವಿಷ್ಣುಮಂಗಲ ದೇವಾಲಯದಲ್ಲಿ ಧ್ವಜಾರೋಹಣ ಹಾಗೂ ವಾರ್ಷಿಕೋತ್ಸವಕ್ಕೆ ಚಾಲನೆ – ಕಹಳೆ ನ್ಯೂಸ್

ಕಾಸರಗೋಡು: ಶ್ರೀ ಮದೆಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ನೇತೃತ್ವದಲ್ಲಿ ಶ್ರೀ ಕ್ಷೇತ್ರದ ತಂತ್ರಿವರ್ಯರಾದ ಬ್ರಹ್ಮಶ್ರೀ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳವರ ತಾಂತ್ರಿಕತ್ವ ಮತ್ತು ಮಾರ್ಗದರ್ಶನದಲ್ಲಿ ಶ್ರೀ ವಿಷ್ಣುಮಂಗಲ ದೇವಾಲಯದ ವಾರ್ಷಿಕೋತ್ಸವವು ಧ್ವಜಾರೋಹಣದ ಮೂಲಕ ಆರಂಭಗೊoಡಿದೆ.

 
ಈ ಪ್ರಯುಕ್ತ ಕ್ಷೇತ್ರದಲ್ಲಿ ಬೆಳಗ್ಗೆ ಹಸಿರುವಾಣಿ ಮೆರವಣಿಗೆ ಬಂದು ಬಳಿಕ ಉಗ್ರಾಣ ಮುಹೂರ್ತ ನಡೆಯಿತು. ಶ್ರೀ ವಿಷ್ಣುಮಂಗಲ ದೇವಾಲಯದ ನೂತನ ಕಛೇರಿಯನ್ನು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಚಾಲನೆ ನೀಡಿದರು. ಬಳಿಕ ಶ್ರೀ ವಿಷ್ಣು ಮಂಗಲ ದೇವರಿಗೆ, ಶ್ರೀಧರ ಕೆದಿಲ್ಲಾಯರ ವತಿಯಿಂದ ಸೇವಾ ರೂಪದಲ್ಲಿ ಪ್ರಭಾವಳಿಯನ್ನು ಸಮರ್ಪಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು