Tuesday, May 21, 2024
ಉಡುಪಿಕಾಪುಭಟ್ಕಳಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ನಡೆದ ಟೈಲರಿಂಗ್ ಸಮಾರೋಪ ಕಾರ್ಯಕ್ರಮ – ಕಹಳೆ ನ್ಯೂಸ್

ಕಾಪು: ಪದ್ಮಶ್ರೀ ಡಾ. ವೀರೇಂದ್ರ ಹೆಗ್ಡೆಯವರ ಮಾರ್ಗದರ್ಶನದಲ್ಲಿ ನಿರಂತರ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಅವಶ್ಯಕ ಅಂಶಗಳನ್ನು ಸಮಾಜದ ಎಲ್ಲಾ ನಾಗರೀಕರಿಗೂ ಮುಟ್ಟಿಸುವಲ್ಲಿ ನಿರಂತರ ಚಟುವಟಿಕೆಗಳನ್ನು ಹಾಕಿಕೊಳ್ಳುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ) ಕಾಪು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಬೆಳ್ಮಣ್ ವಲಯದ ಸೂಡ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ಸಮಾರೋಪ ಕಾರ್ಯಕ್ರಮ ನಡೆಯಿತು.

ಜಾಹೀರಾತು
ಜಾಹೀರಾತು


ಕಾರ್ಯಕ್ರಮವನ್ನು ಜನಜಾಗೃತಿ ವಲಯಾಧ್ಯಕ್ಷ ಶ್ರೀಶಂಕರ್ ಕುಂದರ್ ಉದ್ಘಾಟಿಸಿ ಜ್ಞಾನ ವಿಕಾಸ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿ ಟೈಲರಿಂಗ್ ಸ್ವ ಉದ್ಯೋಗದ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಟೈಲರಿಂಗ್ ಶಿಕ್ಷಕಿ ಅಶ್ವಿತಾ ಮಾತನಾಡಿ, ಟೈಲರಿಂಗ್ ತರಬೇತಿ ಪಡೆದ ಎಲ್ಲರಿಗೂ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಲಜಾಕ್ಷಿ ವಹಿಸಿದ್ದು, ಕಾರ್ಯಕ್ರಮದಲ್ಲಿ ತರಬೇತಿದಾರರಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು. ಕಾರ್ಯಕ್ರಮವನ್ನು ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತ ನಿರೂಪಿಸಿ ಸೇವಾ ಪ್ರತಿನಿಧಿ ರಜನಿ ಸ್ವಾಗತಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು