Saturday, March 14, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಆಕಸ್ಮಿಕ ಬೆಂಕಿಯಿಂದ ಗಂಭೀರ ಗಾಯಗೊಂಡಿರುವ ಬಾಲಕನ ಆರೋಗ್ಯ ವಿಚಾರಿಸಿದ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ- ಕಹಳೆ ನ್ಯೂಸ್

ಬಂಟ್ವಾಳ: ಶಂಭೂರು ಪ್ರೌಢ ಶಾಲೆಯ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಅಪ್ರಾಪ್ತ ಶಾಲಾ ಬಾಲಕನಿಗೆ ಬೆಂಕಿ ತಾಗಿ, ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕನನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ನಂದನ್ ಮಲ್ಯ ಬೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಬಳಿಕ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಅವರು ಬಾಲಕನ ತಾಯಿಗೆ ಧೈರ್ಯ ತುಂಬಿದ್ದಲ್ಲದೆ, ಸಹಕಾರ ನೀಡುವ ಭರವಸೆ ನೀಡಿದರು. ಅರ್ಥಿಕವಾಗಿ ತೀರಾ ಸಂಕಷ್ಟದ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪರಿಸ್ಥಿತಿಯಲ್ಲಿರುವ ಬಡ ಕುಟುಂಬಕ್ಕೆ ಆಗಿರುವ ಘಟನೆಯನ್ನು ತಿಳಿದು ಬೇಸರ ವ್ಯಕ್ತಪಡಿಸಿದ ಅವರು ಶಾಲಾ ಸಂಚಾಲಕರ ಜೊತೆ ಮಾತನಾಡಿ, ಯಾವ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಪ್ರಕಾಶ್ ಪೂಜಾರಿ ಗರೋಡಿ, ಜಿಲ್ಲಾ ಉಪಾಧ್ಯಕ್ಷ ಆರ್ಶಿತ್ ನೊಂಡ, ಕಾರ್ಯದರ್ಶಿಗಳಾದ ಸುರೇಶ್ ಕೋಟ್ಯಾನ್, ಕಾರ್ಯದಶಿ ಧನುಷ್ ಶೆಟ್ಟಿ ಬೊಲ್ಪು ಗುಡ್ಡೆ, ಕಾರ್ತಿಕ್ ಕೋಟ್ಯಾನ್, ಮನೋಜ್ ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು