ಸರಸ್ವತೀ ವಿದ್ಯಾಲಯದ 10ನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಬೀಳ್ಕೋಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ಪ್ರಸಕ್ತ ಶೈಕ್ಷಣಿಕ ವರ್ಷದ 10ನೇ ತರಗತಿ ವಿದ್ಯಾರ್ಥಿಗಳ ದೀಪ ಪ್ರದಾನ ಬೀಳ್ಕೋಡುವ ಕಾರ್ಯಕ್ರಮ ಮಾರ್ಚ್ 8ರಂದು ಹನುಮಾನ್‌ನಗರ ಕೇವಳ ಇಲ್ಲಿಯ ಶಾರದಾ ಸಭಾಂಗಣದಲ್ಲಿ ನಡೆಯಿತು.

ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಅಧ್ಯಕ್ಷರಾದ ಡಾ|| ಪ್ರಭಾಕರ ಭಟ್ ಕಲ್ಲಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿ ಸಮಾಜಕ್ಕೋಸ್ಕರ ನಾವು ಬದುಕಬೇಕು. ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು. ಇಲ್ಲಿಂದ ಹೊರ ಹೋಗುತ್ತಿರುವ ವಿದ್ಯಾರ್ಥಿಗಳು ಸಂಸ್ಕೃತಿಯ ರಾಯಭಾರಿಗಳಾಗಬೇಕು. ಇಲ್ಲಿ ಕಲಿತಂತಹ ಸಂಸ್ಕಾರ, ನಿಮ್ಮ ಮುಂದಿನ ಕಾಲೇಜುಗಳಲ್ಲಿ ಅನುಸರಿಸುತ್ತಾ ಆ ಮೂಲಕ ಸರಸ್ವತೀ ವಿದ್ಯಾಲಯದ ರಾಯಭಾರಿಗಳಾಗಿ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಪ್ರಭಾಕರ ನಿವೃತ್ತ ಹವಾಲ್ದಾರ್ ಭಾರತೀಯ ಭೂಸೇನೆ ಇವರು ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಇನ್ನೋರ್ವ ಅತಿಥಿಗಳಾಗಿ ಉಪಸ್ಥಿತರಿದ್ದ ಶ್ರೀ ಜಯರಾಮ್ ಗಟ್ಟಿಗಾರು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಸಾಹಸವನ್ನು ಮಾಡಬೇಕು, ಒಳ್ಳೆಯ ಸಮಾಜ ಸೇವಕರಾಗಬೇಕು, ಈ ಸಂಸ್ಥೆಯಲ್ಲಿ ಕಲಿತಂತಹ ಸಂಸ್ಕಾರವನ್ನು ಮುಂದೆಯೂ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳು ಹಣತೆ ಉಳಿಸಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಹಿರಿಯರ ಆಶೀರ್ವಾದ ಪಡೆದುಕೊಂಡರು. 10ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಜವಾಬ್ದಾರಿಯನ್ನು 9ನೇ ತರಗತಿಯವರಿಗೆ ದೀಪ ಪ್ರದಾನ ಮಾಡುವ ಮೂಲಕ ವಹಿಸಿಕೊಟ್ಟರು. ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊoಡರು. ಶಿಕ್ಷಕಿ ಶ್ರೀಮತಿ ರಕ್ಷಿತಾ ರೈ ಎಸ್ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವಿರಾಜ್ ಶೆಟ್ಟಿ ಕಡಬ ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್ ಉಪಸ್ಥಿತರಿದ್ದರು. ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಸಂಚಾಲಕರಾದ ಶ್ರೀ ವೆಂಕಟರಮಣ ರಾವ್ ಮಂಕುಡೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಭವಿಷ್ ಪಿ ಆರ್ 9ನೇ ತರಗತಿ ಸ್ವಾಗತಿಸಿ, ಕುಮಾರಿ ಯಶ್ವಿತಾ ವಂದಿಸಿದರು. ಕುಮಾರಿ ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು.














