Monday, March 16, 2026
ದಕ್ಷಿಣ ಕನ್ನಡಸುದ್ದಿ

ಅಡಿಕೆ ಕಳವು ಪ್ರಕರಣ ; ಸೊತ್ತು ಸಹಿತ ಓರ್ವ ಬೆಳ್ಳಾರೆ ಪೊಲೀಸರ ವಶಕ್ಕೆ – ಕಹಳೆ ನ್ಯೂಸ್

ಬೆಳ್ಳಾರೆ : ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಎಂಬಲ್ಲಿ ಮಾ.14ರ ಸಂಜೆಯಿAದ 16ರ ಬೆಳಗ್ಗಿನ ಅವಧಿಯಲ್ಲಿ ಹಿರಿಯಣ್ಣ ಎಂಬವರ ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬoಧಿಸಿದoತೆ, ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಅ.ಕ್ರ 30-2024 ಕಲಂ 380 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಸುಳ್ಯ, ಮಂಡೆಕೋಲು ನಿವಾಸಿ ಸುಪೀತ್ ಕೆ (20) ಬಂಧಿತ.

ಜಾಹೀರಾತು
ಜಾಹೀರಾತು

ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು 83,000/ ರೂ ಮೌಲ್ಯದ 209 ಕೆ ಜಿ ಸುಲಿದ ಅಡಿಕೆ ಹಾಗೂ ಕೃತ್ಯಕ್ಕೆ ಬಳಸಿದ ರೂ 1,00,000/ ಮೌಲ್ಯದ ಆಟೋ ರಿಕ್ಷಾವನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಜಿಲ್ಲೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ, ಬೆಳ್ಳಾರೆ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಬಿ.ಪಿ ಸಂತೋಷ್ ಹಾಗೂ ಠಾಣಾ ಸಿಬ್ಬಂದಿಗಳಾದ ನವೀನ ಕೆ , ಕೃಷ್ಣಪ್ಪ, ದೇವರಾಜ್, ಸಂತೋಷ್ ಕೆ ಜಿ, ಸುಭಾಸ್ ಕಿತ್ತೂರ, ಪುರಂದರ ರವರುಗಳ ತನಿಖಾ ತಂಡ ಕಾರ್ಯಚರಣೆ ನಡೆಸಿರುತ್ತಾರೆ.