Recent Posts

Monday, June 8, 2026
ದಕ್ಷಿಣ ಕನ್ನಡರಾಜಕೀಯಸುದ್ದಿಸುಬ್ರಹ್ಮಣ್ಯ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ-ಕಹಳೆ ನ್ಯೂಸ್

ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಮಂಗಳವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ದೇವಳದ ಒಳಗೆ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು.

ಜಾಹೀರಾತು

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು, ಶೃಂಗೇರಿ, ಗೌರಿಗದ್ದೆ, ಗೋಕರ್ಣ, ಮುಂತಾದ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯುವ ಉದ್ದೇಶ ನಮ್ಮದಾಗಿದೆ. ಈ ಹಿಂದೆ ಕೂಡ ದೇವರು ನಮ್ಮನ್ನ ಕೈ ಬಿಟ್ಟಿಲ್ಲ. ಒಳ್ಳೆಯದನ್ನೇ ಮಾಡಿದ್ದಾರೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದರು. ತದನಂತರ ನಕ್ಸಲರು ಶಂಕೆ ಇರುವಂತ ಕೂಜಿ ಮಲೆ ಹಾಗೂ ಐನೆಕ್ಕಿದು ಗ್ರಾಮಗಳ ಮನೆಗಳಿಗೆ ಬಂದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಈ ಬಗ್ಗೆ ಪೊಲೀಸ ಅಧಿಕಾರಿ ಗಳೊಂದಿಗೆ ಮಾತನಾಡುತ್ತೇನೆ. ಹಾಗೆ ಕೋವಿ ಪರವಾನಿಗೆ ಇರ್ತಕ್ಕಂತವರು ಡಿಪೋಸಿಟ್ ಮಾಡ ಬೇಕೋ ಬೇಡವ ಎನ್ನುವ ಬಗ್ಗೆ ಸಂಬAಧಪಟ್ಟ ಜಿಲ್ಲಾಧಿಕಾರಿಗಳಲ್ಲಿ ಚರ್ಚಿಸುತ್ತೇನೆ ಎಂದರು. ಈ ಸಂದರ್ಭದಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿಸಿ ಜಯರಾಮ, ಕಡಬ ಬ್ಲಾಕ್ ಸುಧೀರ್ ಕುಮಾರ್ ಶೆಟ್ಟಿ, ಕಾಂಗ್ರೆಸ್ ಮುಖಂಡರುಗಳಾದ ಭರತ್ ಮುಂಡೋಡಿ, ಧನಂಜಯ ಅರ್ಥಂಗಾಯ, ಮಮತಾ ಗಟ್ಟಿ, ಅಶೋಕ ನಿಕ್ರಾಜ, ಪಿಸಿ ವರ್ಗೀಸ್, ಮಾಧವ ಮಾನಾಡು, ಕೃಷ್ಣಪ್ಪ, ಪ್ರದೀಪ್ ಕಳಿಗೆ, ದಿನೇಶ್ ಮಡ್ತಿಲ್, ಹರೀಶ ಹಿಂಜಾಡಿ ,ರಾಜೀವ್ ರೈ, ವಿಜಯಕುಮಾರ ಸೊರಕೆ, ವಿಮಲ ರಂಗಯ್ಯ, ಸರಸ್ವತಿ ಕಾಮತ್, ಶಿವರಾಮ ರೈ, ಕೃಷ್ಣಮೂರ್ತಿ ಭಟ್ ಸುರೇಶ್ ಭಟ್ ಮುಂತಾದವರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು