Saturday, May 18, 2024
ಉಡುಪಿಕಾಪುದಕ್ಷಿಣ ಕನ್ನಡಸುದ್ದಿ

ಮಹಿಳಾ ಕಾನ್ಸ್ಟೇಬಲ್ ಜ್ಯೋತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ – ಕಹಳೆ ನ್ಯೂಸ್

ಉಡುಪಿ:ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯ ಮಹಿಳಾ ಕಾನ್ಸ್ಟೇಬಲ್ ಜ್ಯೋತಿ (29) ನೇಣು ಬಿಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪೇದೆ ಎಂದು ತಿಳಿದು ಬಂದಿದೆ.

ಜಾಹೀರಾತು
ಜಾಹೀರಾತು

ಜ್ಯೋತಿ ಅವರು ಉಡುಪಿ ಜಿಲ್ಲೆ ಕಾಪು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಾಗಲಕೋಟೆ ಮೂಲದವರಾದ ಜ್ಯೋತಿ ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆAಬ ಶಂಕೆ ವ್ಯಕ್ತವಾಗಿದೆ.
ಇನ್ನು ಜ್ಯೋತಿ ಅವರು ಪತಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಮೆಕ್ಯಾನಿಕ್ ಆಗಿದ್ದು, ದಂಪತಿ ನಡುವೆ ನಿತ್ಯ ಕಲಹವಾಗುತ್ತಿತ್ತು ಎಂದು ಹೇಳಲಾಗುತ್ತಿದೆ.
ಪ್ರತಿ ನಿತ್ಯ ದಂಪತಿ ಮಧ್ಯೆ ಜಗಳ ನಡೆಯುತ್ತಿರುವ ಬಗ್ಗೆ ಸಹೋದ್ಯೋಗಿಗಳು ಮಾಹಿತಿ ನೀಡಿದ್ದು, ಪತಿ ಹಾಲ್‌ನಲ್ಲಿ ಮಲಗಿರುವ ವೇಳೆಯೇ ರೂಂನಲ್ಲಿ ಜ್ಯೋತಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.
ಇನ್ನು ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿದ್ದಲಿಂಗಪ್ಪ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದು ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು