Tuesday, May 21, 2024
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಇಂದು ಪಿಯುಸಿ ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ – ಕಹಳೆ ನ್ಯೂಸ್

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (Second PU Result) ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆಗೆ ಹಾಜರಾದ ಒಟ್ಟು ಮಕ್ಕಳ ಪೈಕಿ ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ.

ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದು, 11 ಗಂಟೆಗೆ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಜಾಹೀರಾತು
ಜಾಹೀರಾತು

2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದರು. ರಾಜ್ಯದಾದ್ಯಂತ 1,124 ಕೇಂದ್ರಗಳಲ್ಲಿ ನಡೆದಿದ್ದ ಪರೀಕ್ಷೆಗೆ ಒಟ್ಟು 6.98 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.

ಜಾಹೀರಾತು

ಪರೀಕ್ಷೆಗೆ ಹಾಜರಾದ ಒಟ್ಟು ವಿದ್ಯಾರ್ಥಿಗಳ ಪೈಕಿ 552690 ಮಂದಿ ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ ದೊರೆತಿದೆ. ಶೇ 97ರಷ್ಟು ತೇರ್ಗಡೆಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಶೇ 96.80 ರಷ್ಟು ಮಂದಿ ಉತ್ತೀರ್ಣರಾಗುವುದರೊಂದಿಗೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಶೇ 94.89ರಷ್ಟು ಫಲಿತಾಂಶದೊಂದಿಗೆ ವಿಜಯಪುರ ಜಿಲ್ಲೆ 3ನೇ ಸ್ಥಾನದಲ್ಲಿದೆ. ಫಲಿತಾಂಶದಲ್ಲಿ ಗದಗ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.

ಕಳೆದ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಮಂದಿ ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.