Saturday, May 18, 2024
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ.

ಜಾಹೀರಾತು
ಜಾಹೀರಾತು

ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು ಸಹಿಸದ ಕಿಡಿಗೇಡಿಗಳು ಇಂತಹ ಕೃತ್ಯ ಮಾಡಿದ್ದಾರೆಂದು ಹಾಲಿ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ಸುನಿಲ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಬೆನ್ನಲ್ಲೇ ಪರಶುರಾಮನ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾ.ಮೂ.ಎಂ.ನಾಗಪ್ರಸನ್ನ ಈ ಆದೇಶ ನೀಡಿದ್ದಾರೆ. ಇದರೊಂದಿಗೆ ಕಳೆದೊಂದು ವರ್ಷದಿಂದ ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಪ್ರಕರಣಕ್ಕೆ ಹೊಸ ತಿರುವು ಲಭಿಸಿದೆ. ತಾವು ಕಂಚಿನ ಪ್ರತಿಮೆಯನ್ನೇ ನಿರ್ಮಿಸಿದ್ದು, ಬಾಕಿ ಕೆಲಸ ಪೂರ್ಣಗೊಳಿಸುವುದಕ್ಕೆ ಸೂಕ್ತ ಭದ್ರತೆ ಹಾಗೂ ಅನುಕೂಲಕರ ವಾತಾವರಣ ನಿರ್ಮಿಸಿಕೊಡುವಂತೆ ಕೃಷ್ಣ ನಾಯ್ಕ್ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಪ್ರಕಟಗೊಂಡ ನಾಲ್ಕು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಆದೇಶ ನೀಡಿದೆ. ಇದೆಲ್ಲದರ ನಡುವೆ ಅಂದು ಟೀಕೆ ಮಾಡಿದ್ದ ಕಾಂಗ್ರೆಸ್ ಸರ್ಕಾರ ಇದಕ್ಕೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು