Sunday, April 26, 2026
ಸುದ್ದಿ

ಜಮಖಂಡಿ ವಿಧಾನಸಭೆ ಉಪಚುನಾವಣೆ: ಭರ್ಜರಿ ಪ್ರಚಾರ ನಡೆಸಲಿರುವ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಜಮಖಂಡಿ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ಮೂರು ದಿನ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ವಿಜಯಪುರ ಜಿಲ್ಲೆ ಬಬಲೇಶ್ವರದಿಂದ ಜಮಖಂಡಿ ಮತಕ್ಷೇತ್ರಕ್ಕೆ ಆಗಮಿಸಲಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ ಪರ ಚಿಕ್ಕಳಕಿ ಗ್ರಾಮದಲ್ಲಿ ಭಾಷಣ ಮಾಡಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಳಿಕ 12.30 ಕ್ಕೆ ಹಿರೇಪಡಸಲಗಿ ಗ್ರಾಮದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4.30 ಕ್ಕೆ ಮುತ್ತೂರು ಗ್ರಾಮದಲ್ಲಿ ಪ್ರಚಾರ ಕೈಗೊಂಡು 6.30 ಕ್ಕೆ ಕಡಪಟ್ಟಿ ಗ್ರಾಮದಲ್ಲಿ ಸಭೆ ನಡೆಸಲಿದ್ದಾರೆ.