Recent Posts

Saturday, April 25, 2026
ಸುದ್ದಿ

ಉಪ ಚುನಾವಣಾ ಪ್ರಚಾರ: ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಸಿದ್ದರಾಮಯ್ಯ – ಕಹಳೆ ನ್ಯೂಸ್

ಬೆಂಗಳೂರು: ಉಪ ಚುನಾವಣೆಯ ಕಾವು ಏರುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಟುವಟಿಕೆ ಜೋರಾಗಿದೆ. ಚುನಾವಣಾ ಪ್ರಚಾರಕ್ಕಾಗಿ ನಿರಂತರವಾಗಿ ಓಡಾಡುತ್ತಿರುವ ಅವರು, ಬಿಜೆಪಿ ವಿರುದ್ಧ ನಿತ್ಯವೂ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರಚಾರದ ಸಂದರ್ಭದ ಭಾಷಣಗಳ ನಡುವೆ ಟ್ವಿಟ್ಟರ್‌ನಲ್ಲಿಯೂ ಸಿದ್ದರಾಮಯ್ಯ ಕಾರ್ಯಪ್ರವೃತ್ತರಾಗಿದ್ದಾರೆ.ಮರು ಚುನಾವಣೆಯ ೫ ಕ್ಷೇತ್ರಗಳಲ್ಲಿ ಬಿಜೆಪಿ ಸೋಲಲಿದೆ. ಶಿವಮೊಗ್ಗದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಿಲ್ಲೆಯಲ್ಲಿ ಮಧು ಬಂಗಾರಪ್ಪ ಪರವಾಗಿ ಕಂಡುಬರುತ್ತಿರುವ ಜನಸ್ಪಂದನೆಯನ್ನು ಗಮನಿಸಿದರೆ ಯಡಿಯೂರಪ್ಪನವರ ಪುತ್ರ ಬಿ.ವೈ ರಾಘವೇಂದ್ರ ಅವರೇ ಮೇಲ್ನೋಟಕ್ಕೆ ಡಮ್ಮಿ ಕ್ಯಾಂಡಿಡೇಟ್ ಎಂದು ಅನಿಸುತ್ತಿದೆ ಎಂದ್ರು.