Recent Posts

Thursday, September 17, 2026
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ.

ಜಾಹೀರಾತು

ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಎಸ್ಎಂ. ಕೃಷ್ಣ ಅವರನ್ನು ಚಿಕಿತ್ಸೆಗಾಗಿ ಮೊದಲಿಗೆ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರನ್ನು ಡಿಸ್ಟಾರ್ಜ್ ಮಾಡಲಾಗಿತ್ತು. ಮತ್ತೆ ಕೆಲ ದಿನಗಳ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಹೆಚ್ಚಿನ ಚಿಕಿತ್ಸೆಗಾಗಿ ಏಪ್ರಿಲ್‌ 29ರಂದು ಮಣಿಪಾಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಸತತ 15 ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಎಸ್.ಎಂ ಕೃಷ್ಣಾ ಅವರಿಗೆ ಚಿಕಿತ್ಸೆ ಮುಂದುವರಿದಿದೆ.