Sunday, April 26, 2026
ಸುದ್ದಿ

ಅಯೋಧ್ಯೆ ರಾಮಮಂದಿರದ ಆವರಣದಲ್ಲಿ ಮೊಬೈಲ್‌ ಬಳಕೆ ನಿಷೇಧ: ದೇವಾಲಯದ ಟ್ರಸ್ಟ್ ನಿ0ದ ಆದೇಶ -ಕಹಳೆ ನ್ಯೂಸ್

ಅಯೋಧ್ಯೆ: ಅಯೋಧ್ಯೆಯ ರಾಮಮಂದಿರದ ಆವರಣ ಮತ್ತು ಮಂದಿರದ ಒಳಗೆ ಮೊಬೈಲ್‌ ಬಳಕೆ ಮಾಡುವಂತಿಲ್ಲ ಎಂದು ದೇವಾಲಯದ ಟ್ರಸ್ಟ್ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಮಾಹಿತಿ ನೀಡಿರುವ ಟ್ರಸ್ಟಿ ಅನಿಲ್‌ ಮಿಶ್ರಾ,’ಎಲ್ಲಾ ಭಕ್ತರು ಈ ನಿರ್ಧಾರವನ್ನು ಗೌರವಿಸಬೇಕು, ಮೊಬೈಲ್‌ ಫೋನ್ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಇಡಲು ಲಾಕರ್‌ ರೂಮ್‌ ಸೌಲಭ್ಯವಿದೆ.

ಅದನ್ನು ಎಲ್ಲಾ ಭಕ್ತರು ಬಳಸಿಕೊಂಡು, ದೇವಾಲಯದಲ್ಲಿ ಸುವ್ಯವಸ್ಥೆ ಕಾಪಾಡಬೇಕು’ ಎಂದು ಮನವಿ ಮಾಡಿದರು.

ಜನಸಾಮಾನ್ಯರು ಮಾತ್ರವಲ್ಲದೆ ವಿಐಪಿಗಳೂ ಕೂಡ ದೇವಾಲಯದ ಆವರಣದಲ್ಲಿ ಮೊಬೈಲ್‌ ಫೋನ್‌ ಬಳಸುವಂತಿಲ್ಲ ಎಂದು ಹೇಳಲಾಗಿದೆ. ಈ ನಿಯಮ ಶನಿವಾರ (ಮೇ 25) ದಿಂದಲೇ ಅನ್ವಯವಾಗಲಿದೆ ಎಂದು ಟ್ರಸ್ಟ್‌ ಹೇಳಿದೆ.