Sunday, September 6, 2026
ಕುಂದಾಪುರಸುದ್ದಿ

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ –ಕಹಳೆ ನ್ಯೂಸ್

ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸಮೃದ್ಧ ಬೈಂದೂರು ಚಾರಿಟೇಬಲ್ ಟ್ರಸ್ಟ್, ಇವರ ಸಹಯೋಗದೊಂದಿಗೆ ಆಸರೆ ಚಾರಿಟೇಬಲ್ ಟ್ರಸ್ಟ್ ವಂಡ್ಸೆ ಮತ್ತು ದೀಪಾಜ್ಯೋತಿ ನೆಟ್ವರ್ಕ್ ಆಫ್ ಪಾಸಿಟಿವ್ ಪೀಪಲ್ಸ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಬ್ಯಾಗ್ ವಿತರಣೆ ಕಾರ್ಯಕ್ರಮ ನೆರವೇರಿತು.

ಜಾಹೀರಾತು

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂತೋಷ್ ಶೆಟ್ಟಿ ಅಧ್ಯಕ್ಷರು ದೀಪಜ್ಯೋತಿ ಉಡುಪಿ ಇವರು ವಹಿಸಿದ್ದರು,ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿಯವರು ಮತ್ತು ಸಮೃದ್ ಬೈಂದೂರು ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಜೊತೆಗೂಡಿ ದೀಪ ಬೆಳಗಿಸುವುದರೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮದಲ್ಲಿ ಡಾ.ಚಿದಾನಂದ ಸಂಜು ಜಿಲ್ಲಾ ಪಿಡ್ಸ್ ನಿಯಂತ್ರಣಧಿಕಾರಿ, ಶ್ರೀಮತಿ ಶೋಭಾ ಲಕ್ಷ್ಮೀ ಎಚ್.ಎಸ್. ತಹಸೀಲ್ದಾರರು ಕುಂದಾಪುರ, ಸಂಜೀವ ವಂಡ್ಸೆ ಅಧ್ಯಕ್ಷರು ಆಸರೆ ಚಾರಿಟೇಬಲ್ ಟ್ರಸ್ಟ್, ಶ್ರೀಮತಿ ಶಾಂತಿ ನೋರಾನಾ, ಯೋಜನಾಧಿಕಾರಿ ದೀಪಾಜ್ಯೋತಿ ಉಡುಪಿ, ಹಾಗೂ ಸಂಸ್ಥೆಯ ಸರ್ವ ಸದಸ್ಯರು, ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಉಪಸಿತರಿದ್ದರು.