Campco ಮಾಜಿ ಅಧ್ಯಕ್ಷ, ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಸಹಕಾರಿ ಕ್ಷೇತ್ರದ ಧುರೀಣ ಎಲ್.ಎನ್. ಕೂಡೂರು ಇನ್ನಿಲ್ಲ ; – ಕಹಳೆ ನ್ಯೂಸ್

ಅವರು ವಿಟ್ಲ ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾಗಿ, ದೇಗುಲದ ಬ್ರಹ್ಮಕಲಶ ಸಂಭ್ರಮದ ರೂವಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.
ಸಹಕಾರಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಕ್ಯಾಂಪ್ಕೊ ಮಾಜಿ ಅಧ್ಯಕ್ಷರಾಗಿ, ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಶ್ರೀರಾಮಚಂದ್ರಾಪುರ ಮಠದ ಹೊಸನಗರ ಚಂದ್ರಮೌಳೀಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ವಿಟ್ಲ ಬಸವನಗುಡಿ ವಿಟ್ಠಲ್ ಜೇಸೀಸ್ ಎಜುಕೇಶನ್ ಸೊಸೈಟಿ ಅಧ್ಯಕ್ಷರಾಗಿ, ವಿಟ್ಠಲ ಪಪೂ ಕಾಲೇಜು ಮತ್ತು ವಿಟ್ಠಲ ಪ್ರೌಢಶಾಲೆಯನ್ನೊಳಗೊಂಡ ವಿಟ್ಠಲ ವಿದ್ಯಾ ಸಂಘದ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.











