Recent Posts

Sunday, April 26, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಸ್ಪರ್ಶಕಲಾ ಮಂದಿರದಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಡೆದ ಚಿಂತನ ಬೈಠಕ್ – ಕಹಳೆ ನ್ಯೂಸ್

ಬಂಟ್ವಾಳ : ಸ್ಪರ್ಶಕಲಾ ಮಂದಿರ ಬಿ.ಸಿ ರೋಡು ಇಲ್ಲಿ ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ವತಿಯಿಂದ ನಮ್ಮ ತಾಲೂಕಿನಲ್ಲಿ ಆಚರಣೆ ಆಗುತ್ತಿರುವ ಶ್ರೀ ಕೃಷ್ಣ ಜನ್ಮಾಷ್ಠಮಿ, ಚೌತಿ, ಶಾರದೋತ್ಸವ ವಿವಿಧ ಸಮಿತಿಗಳ ಪ್ರಮುಖರ ಚಿಂತನ ಬೈಠಕ್ ನಡೆಯಿತು.

ವಿಶ್ವ ಹಿಂದೂ ಪರಿಷದ್ ಪುತ್ತೂರು ಜಿಲ್ಲಾಧ್ಯಕ್ಷ ಶ್ರೀ ಡಾ. ಕೃಷ್ಣಪ್ರಸನ್ನ, ಜಿಲ್ಲಾ ಸತ್ಸಂಗ ಪ್ರಮುಖರಾದ ಕಶೆಕೋಡಿ ಸೂರ್ಯನಾರಾಯಣ ಭಟ್, ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಶ್ರೀ ಪ್ರಸಾದ್ ಕುಮಾರ್ ರೈಯವರು ಧಾರ್ಮಿಕ ಆಚರಣೆಯಲ್ಲಿ ನಾವು ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಚಿಂತನ ನಡೆಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಶೇಷ ಬೈಠಕ್ ನಲ್ಲಿ ತಾಲೂಕಿನ ವಿವಿಧ ಸಮಿತಿಗಳ 200 ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದು ಜಿಲ್ಲಾ ಸಂಯೋಜಕ್ ಭರತ್ ಕುಮ್ಡೇಲ್, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಧರ್ಮ ಪ್ರಸರಣಾ ಪ್ರಮುಖ ಸುರೇಶ್ ಬೆಂಜನಪದವು ಅಲ್ಲದೇ ಪ್ರಖಂಡದ ಪ್ರಮುಖರು ಹಾಜರಿದ್ದರು. ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್ ಸರಪಾಡಿ ಸ್ವಾಗತಿಸಿ ನಿರೂಪಿಸಿದರು, ಪ್ರವೀಣ್ ಕುಂಟಾಲಪಲ್ಕೆ ವೈಯಕ್ತಿಕ ಗೀತೆ ಹಾಡಿದರು.