Wednesday, March 11, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರ- ಕಹಳೆ ನ್ಯೂಸ್

ಬಂಟ್ವಾಳ : ಯುವವಾಹಿನಿ ಸಂಸ್ಥೆಯು ಪರಿವರ್ತನೆಯ ದಾರಿದೀಪವಾಗಿದೆ, ಸದಾ ಹೊಸತನದ ಮೂಲಕ ಎಲ್ಲರನ್ನೂ ಆಕರ್ಷಿಸುವ ಯುವವಾಹಿನಿ ಸಾಧನೆಯ ಶಿಖರವನ್ನೇರುವಂತಾಗಲಿ ಎಂದು ಬಿಲ್ಲವಾಸ್ ಕತಾರ್ ಅಧ್ಯಕ್ಷ ಸಂದೀಪ್ ಸಾಲ್ಯಾನ್ ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅವರು ಬಿ.ಸಿ.ರೋಡಿನ ಯುವವಾಹಿನಿ ಭವನದಲ್ಲಿ ಕರ್ನಾಟಕ ರಾಜ್ಯೊತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ರಿ. ಬಂಟ್ವಾಳ ತಾಲೂಕು ಘಟಕದ ಆಶ್ರಯದಲ್ಲಿ ಯುವವಾಹಿನಿ ಸದಸ್ಯರಿಗೆ ನಡೆದ ವಿಷ಼ನ್ 2024 ನಾಯಕತ್ವ ತರಬೇತಿ ಕಾರ್ಯಾಗಾರವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು
ಜಾಹೀರಾತು

ರಾಷ್ಟ್ರೀಯ ತರಬೇತುದಾರ ಅಭಿಜಿತ್ ಕರ್ಕೇರ ವಿವಿಧ ಚಟುವಟಿಕೆಗಳ ಮೂಲಕ ತರಬೇತಿ ಕಾರ್ಯಾಗಾರ ನಡೆಸಿಕೊಟ್ಟರು. ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾದ ದಿನೇಶ್ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ವ್ಯಕ್ತಿತ್ವ ವಿಕಸನ ನಿರ್ದೇಶಕ ರಾಜೇಂದ್ರ ಪಲ್ಲಮಜಲು , ಸಲಹೆಗಾರ ಟಿ.ಶಂಕರ ಸುವರ್ಣ ಉಪಸ್ಥಿತರಿದ್ದರು.

ಸುಮಾರು 75 ಸದಸ್ಯರು ವಿವಿಧ ಚಟುವಟಿಕೆಗಳ ಮೂಲಕ ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ದಿನೇಶ್ ಸುವರ್ಣ ಸ್ವಾಗತಿಸಿದರು, ದ್ವಿತೀಯ ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು, ಕಲೆ ಹಾಗೂಸಾಹಿತ್ಯ ನಿರ್ದೆಶಕ ಲೋಹಿತ್ ಬಂಟ್ವಾಳ ಅತಿಥಿಗಳನ್ನು ಪರಿಚಯಿಸಿದರು, ಜತೆ ಕಾರ್ಯದರ್ಶಿ ಸುನೀಲ್ ಸಾಲ್ಯಾನ್ ವಂದಿಸಿದರು.