Recent Posts

Saturday, May 9, 2026
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಮಂಗಳೂರು ಕಾರಾಗೃಹದ ಮೇಲೆ ಬೆಳ್ಳಂಬೆಳಗ್ಗೆ ಪೊಲೀಸರ ದಾಳಿ ; ಜೈಲಲ್ಲೇ ಸಿಕ್ತು ಡ್ರಗ್ಸ್‌, ಗಾಂಜಾ, ಮೊಬೈಲ್‌ – ಕಹಳೆ ನ್ಯೂಸ್

ಮಂಗಳೂರು: ಇಲ್ಲಿನ ಕೋಡಿಯಾಲ್‌ಬೈಲ್‌ನಲ್ಲಿರುವ ಕಾರಾಗೃಹದ ಮೇಲೆ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಗಾಂಜಾ, ಡ್ರಗ್ಸ್, ಮೊಬೈಲ್ ಸೇರಿ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಜೈಲಿನೊಳಗೆ ಇಂದು ಬೆಳಗ್ಗಿನ ಜಾವ 150 ಕ್ಕೂ ಅಧಿಕ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ ಕೈದಿಗಳನ್ನು ಹಾಗೂ ಸೆಲ್‌ಗಳಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಖೈದಿಗಳ ಜೊತೆ ಗಾಂಜಾ ಹಾಗೂ ಡ್ರಗ್ಸ್ ಪ್ಯಾಕೇಟ್‌ಗಳು ಸಿಕ್ಕಿದ್ದು ಅದನ್ನ ವಶಕ್ಕೆ ಪಡೆಯಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

25 ಮೊಬೈಲ್ ಫೋನ್‌ಗಳು, ಐದು ಚಾರ್ಜರ್, ಐದು ಇಯರ್ ಫೋನ್, ಒಂದು ಬ್ಲೂಟೂತ್ ಡಿವೈಸ್, ಒಂದು ಪೆನ್‌ಡ್ರೈವ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಪತ್ತೆಯಾಗಿವೆ. ಎಲ್ಲವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಡ್ರಗ್, ಗಾಂಜಾ ಪತ್ತೆ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್‌ ಅಗರ್ ವಾಲ್ ತನಿಖೆಗೆ ಆದೇಶ ನೀಡಿದ್ದಾರೆ.

ಪೊಲೀಸ್‌ ಕಮಿಷನರ್‌ ಮಾರ್ಗದರ್ಶನದಲ್ಲಿ ಇಬ್ಬರು ಡಿಸಿಪಿ, ಮೂವರು ಎಸಿಪಿ, 15 ಇನ್‌ಸ್ಪೆಕ್ಟರ್‌, 150 ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು