Tuesday, March 10, 2026
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿಗೆ ಅಗ್ನಾಥಾನ್ – 2024′ ಅಂತರ್ ಕಾಲೇಜ್ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿಗಳು-ಕಹಳೆ ನ್ಯೂಸ್

ಪುತ್ತೂರು: ಸೈಂಟ್ ಆಗ್ನೆಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗಾಗಿ ನಡೆದ ಅಂತರ್ ಕಾಲೇಜ್ ಪೆಸ್ಟ್ ‘ಅಗ್ನಾಥಾನ್ – 2024’ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ಯುಗಳ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಪ್ರಾರ್ಥನಾ ಬಿ ಹಾಗೂ ಖುಷಿ ಪ್ರಥಮ ಸ್ಥಾನ ಹಾಗೂ ವಿಜ್ಞಾನ ಮಾದರಿ – ತಯಾರಿ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ವೈಭವ್ ವಿ.ಕೆ ನಾಯ್ಕ ಮತ್ತು ಸಿದ್ದಾಂತ್ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಪ್ರದರ್ಶನ ಕಲಾ ಸಂಘದ ನಿರ್ದೇಶಕರಾದ ಸುಮನಾ ರಾವ್, ಭರತ್.ಜಿ.ಪೈ ರಶ್ಮಿ.ಪಿ.ಎಸ್ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು