Tuesday, March 10, 2026
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಫಿಲೋಮಿನಾ ಪ.ಪೂ ಕಾಲೇಜಿನ ಅಂಜನ್ ಗೌಡ ಜಿ ಬಿ ರಾಜ್ಯಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಹಾಗೂ ಶ್ರೀ ನಿರಂಜನ ಸ್ವಾಮಿ ಪದವಿ ಪೂರ್ವ ಕಾಲೇಜು ಸುಂಕದಕಟ್ಟೆ ಬಜಪೆ ಇದರ ಆಶ್ರಯದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಟೆನ್ನಿಕ್ವಾಯಿಟ್ ಪಂದ್ಯಾಟದಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ ಬಿ, ದ್ವಿತೀಯ ವಿಜ್ಞಾನ ವಿಭಾಗದ ಅಕ್ಷಯ ಎಸ್ ಹಾಗೂ ತ್ರಿಶಾನ್ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಅಂಜನ್ ಗೌಡ ಜಿ ಬಿ ಇವರು ಯಾದಗಿರಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು