Recent Posts

Tuesday, March 10, 2026
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ಆಜಾದ್ ಭವನದಲ್ಲಿ ನಡೆದ ನವ ಭಾರತ ವೈಭವ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮ ದರ್ಜೆ ಕಾಲೇಜಿನ ಪ್ರದೀಪ್ತ ಸಾಂಸ್ಕೃತಿಕ ಸಂಘದ ವತಿಯಿಂದ ನವ ಭಾರತ ವೈಭವ ಎಂಬ ಶೀರ್ಷಿಕೆಯಡಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವು ಕಾಲೇಜಿನ ಆಜಾದ್ ಭವನದಲ್ಲಿ ನಡೆಯಿತು.

ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿಗಳು ಭಾರತದ ಶ್ರೇಷ್ಠತೆಯನ್ನು ಪ್ರತಿಬಿಂಬಿಸುವ ವಿವಿಧ ನೃತ್ಯ ಪ್ರಕಾರಗಳ ಪ್ರದರ್ಶನಗಳನ್ನು ಮಾಡಿದರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು, ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರೂ ಆದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಖ್ಯಾತ ಹಾಸ್ಯ ಕಲಾವಿದರು ಹಾಗೂ ಡೈಜಿವರ್ಲ್ಡ್ ಸ್ಟ್ಯಾಂಡ್ ಅಪ್ ಕಾಮಿಡಿ ವಿನ್ನರ್ ಶ್ರೀ ಮನೀಶ್ ಶೆಟ್ಟಿ ಇವರು ಅರಶಿನ ಬಣ್ಣ ಬಳಿದು ನವಭಾರತ ವೈಭವ ಹೆಸರನ್ನು ಪ್ರಸ್ತುತ ಪಡಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಾಹೀರಾತು
ಜಾಹೀರಾತು

ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ, ಸಾಂಸ್ಕೃತಿಕ ಸಂಘದ ಸಹ ನಿರ್ದೇಶಕಿ ಕು. ಪ್ರಜ್ಞಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ಬಿಸಿಎ ವಿದ್ಯಾರ್ಥಿಗಳಾದ ಕು. ದಿವ್ಯಲಕ್ಷ್ಮಿ ಸ್ವಾಗತಿಸಿ, ಕು. ಯಜ್ಞಶ್ರೀ ವಂದಿಸಿ, ಕು. ಅಶ್ವಿನಿ ಕಾರ್ಯಕ್ರಮ ನಿರ್ವಹಿಸಿದರು.