Recent Posts

Saturday, April 25, 2026
ಬೆಂಗಳೂರುಸುದ್ದಿ

ಸಿದ್ದರಾಮಯ್ಯ ರಿಸೈನ್ ಮಾಡಿದ್ರೆ ಸಿಎಂ ನಾನಾಗಬೇಕು ಇಲ್ಲ ನೀವಾಗಬೇಕು..: ಮಹಾ ನಾಯಕರ ನಡುಗೆ ಒಪ್ಪಂದ..?-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಂಡಿದ್ದು, ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ತೀವ್ರ ಒತ್ತಡ ಕೇಳಿ ಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಒಂದೂವರೆ ವರ್ಷ ಕಳೆಯುತ್ತಾ ಬಂದಿದ್ದು, ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ರಾಜ್ಯದಲ್ಲಿ ದಲಿತ ಸಿಎಂ ಕೂಗು ಕೂಡ ಜೋರಾಗಿಯೇ ಸದ್ದು ಮಾಡುತ್ತಿದೆ.

ಈಗಾಗಲೇ ಮುಖ್ಯಮಂತ್ರಿ ರೇಸ್‌ ನಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌, ದಲಿತ ನಾಯಕರಾದ ಸತೀಶ್‌ ಜಾರಕಿಹೊಳಿ , ಡಾ ಜಿ ಪರಮೇಶ್ವರ್‌ ಸೇರಿದಂತೆ ಹಲವು ನಾಯಕರು ರೇಸ್‌ ನಲ್ಲಿದ್ದಾರೆ.

ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮುನ್ನಲೆಗೆ ಬಂದ ಹಿನ್ನೆಲೆ ಸತೀಶ್‌ ಜಾರಕಿಹೊಳಿ ಅವರು ದೆಹಲಿಯಲ್ಲಿ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ, ಸಾಲು ಸಾಲು ಸಭೆಗಳು ನಡೆದಿದ್ದು ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದೆಯೇ ಎನ್ನುವ ಪ್ರಶ್ನೆ ಉದ್ಭವಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಬದಲಾವಣೆಯ ಕೂಗು ಹೆಚ್ಚಾದ ಬೆನ್ನಲ್ಲೆ ದಲಿತ ನಾಯಕರಾದ ಡಾ. ಜಿ ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಇಬ್ಬರೂ ಮಾತನಾಡಿಕೊಂಡು ಪರಸ್ಪರ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಒಂದು ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆಯಾದರೆ ದಲಿತರೇ ಮುಖ್ಯಮಂತ್ರಿ ಆಗಬೇಕು. ಅದೂ ಕೂಡ ಒಂದು ನಾನೇ ಸಿಎಂ ಆಗ್ತೀನಿ ಇಲ್ಲ ನೀವು ಸಿಎಂ ಆಗಿ ಎಂದು ಒಪ್ಪಂದ ಆಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.