Sunday, March 8, 2026
ಕಾಪುಸುದ್ದಿ

ಕೊಡ್ಗಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ-ಕಹಳೆ ನ್ಯೂಸ್

ಅಮಾಸೆಬೈಲು ಚಾರಿಟೇಬಲ್ ಟ್ರಸ್ಟ್ (ರಿ.), ಅಮಾಸೆಬೈಲು, ಕರ್ಣಾಟಕ ಬ್ಯಾಂಕ್ (ಲಿ.) ಬೆಂಗಳೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳ, ಗ್ರಾಮ ಪಂಚಾಯತ್, ಅಮಾಸೆಬೈಲು, ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ಅಮಾಸೆಬೈಲು ಹಾಗೂ ಬಿ. ವಿ. ಜಿ.ಕೊಡ್ಗಿ ಅಭಿಮಾನಿ ಬಳಗ ಇವರ ಸಹಯೋಗದಲ್ಲಿ ದಿನಾಂಕ 03-11-2024 ರಂದು ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆದ “ಕೊಡ್ಗಿ ನೆನಪು ಮತ್ತು ಉತ್ತಮ ಕೃಷಿಕ ಸನ್ಮಾನ ಹಾಗೂ ಶಾಲಾ ಬಸ್ಸು ನಿರ್ವಹಣೆ ಬಗ್ಗೆ ಚೆಕ್ ವಿತರಣೆ” ಕಾರ್ಯಕ್ರಮವನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಕರ್ನಾಟಕ ಬ್ಯಾಂಕ್ ಲಿ ಬೆಂಗಳೂರು ಡಿ.ಜಿ.ಎಂ ಗೋಪಾಲಕೃಷ್ಣ ಸಾಮಗ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.), ಧರ್ಮಸ್ಥಳದ ಕಾರ್ಯನಿರ್ವಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್, ಅಮಾಸೆಬೈಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಕುಲಾಲ್, ವ್ಯವಸಾಯ ಸೇವಾ ಸಹಕಾರಿ ಸಂಘ ನಿ, ಅಮಾಸೆಬೈಲು ಅಧ್ಯಕ್ಷರಾದ ಸದಾನಂದ ಶೆಟ್ಟಿ, ಅಮಾಸೆಬೈಲು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಲಕ್ಷ್ಮಣ್ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು