Recent Posts

Sunday, April 26, 2026
ಸುದ್ದಿ

ನಿರ್ಮಾಣ ಹಂತದಲ್ಲಿದ್ದ ಬ್ರಿಡ್ಜ್ ಗೆ ಶಾಲಾ ಬಸ್ ಡಿಕ್ಕಿ : ಶಿಕ್ಷಕಿ ಬಲಿ, 15 ವಿದ್ಯಾರ್ಥಿಗಳು ಗಂಭೀರ-ಕಹಳೆ ನ್ಯೂಸ್

ನಿರ್ಮಾಣ ಹಂತದಲ್ಲಿದ್ದ ಬ್ರಿಡ್ಜ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿಯೊಬ್ಬರು ಸಾವನ್ನಪ್ಪಿ, 15 ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಜೈಪುರದಲ್ಲಿ ನಡೆದಿದೆ. NH 52 ರ ಭೋಜ್ಲಾವಾ ಕಟ್ ಹತ್ತಿರ ಈ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬ್ರಿಡ್ಜ್ ನಿಂದ ಇಳಿಯುವ ಸಂದರ್ಭದಲ್ಲಿ ಬಸ್ ಬ್ರೇಕ್ ಫೇಲ್ ಆದ ಕಾರಣ ನಿರ್ಮಾಣ ಹಂತದಲ್ಲಿದ್ದ ಮತ್ತೊಂದು ಬ್ರಿಡ್ಜ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ಶಿಕ್ಷಕಿ ಸ್ಥಳದಲ್ಲೇ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಗಾಯಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಗೊಂಡ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ನಿಯಮ ಉಲ್ಲಂಘಿಸಿ ವೇಗವಾಗಿ ಚಲಿಸುತ್ತಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ.