
ಪುತ್ತೂರು: ಬೆಂಗಳೂರಿನ ಶೇಷಾದ್ರಿಪುರಂ ಸಂಜೆ ಕಾಲೇಜು, ಕನ್ನಡ ಸಂಘ ಹಾಗೂ ಅನ್ನಪೂರ್ಣ ಪಬ್ಲಿಷಿಂಗ್ ಹೌಸ್ ಬೆಂಗಳೂರು ಇದರ ಆಶ್ರಯದಲ್ಲಿ ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ(ಸ್ವಾಯತ್ತ) ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಎಚ್.ಜಿ ಶ್ರೀಧರ ಅವರ ‘ಬಯಲು’ ಅಲ್ಲಮನ ಕಥನ ಕೃತಿ ಬಿಡುಗಡೆಯಾಗಲಿದೆ.
ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಈ ಕರ‍್ಯಕ್ರಮ ನಡೆಯಲಿದ್ದು ಕೃತಿಯನ್ನು ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಲೋಕಾರ್ಪಣೆ ಮಾಡಲಿದ್ದಾರೆ. ಕರ‍್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ತಜ್ಞ ನಾಡೋಜ ಡಾ.ವೂಡೇ.ಪಿ.ಕೃಷ್ಣ ವಹಿಸಲಿದ್ದು ಕೃತಿಯ ಕುರಿತು ವಂದೇ ಮಾತರಂ ಪಾಠಶಾಲಾ ಸಂಸ್ಥಾಪಕ ಡಾ.ಜಿ.ಬಿ ಹರೀಶ ಮಾತನಾಡಲಿದ್ದಾರೆ
ಎಂದು ಪ್ರಕಟಣೆಯಲ್ಲಿ ಕೃತಿಕಾರ ಡಾ.ಶ್ರೀಧರ ಎಚ್.ಜಿ ತಿಳಿಸಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ, ಬದುಕಿನಲ್ಲಿ ಸವಾಲುಗಳು ಎದುರಾದಾಗ ಕೇವಲ ನಕಾರಾತ್ಮಕವಾಗಿ ಚಿಂತಿಸದೇ ಸಕಾರಾತ್ಮಕವಾಗಿ ಆಲೋಚನೆ ಮಾಡುವ ಮೂಲಕ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕಿದೆ.
ಸಮಾನತೆ, ಸಹಬಾಳ್ವೆಯ ಕಡೆಗೆ ಗಮನಹರಿಸಿ ವಿದ್ಯಾರ್ಜನೆ ವೇಳೆ ಶ್ರದ್ದೆ, ಹಾಗೂ ಶಿಸ್ತುಬದ್ಧವಾಗಿ ಕಲಿಕಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎನ್., ವಿದ್ಯಾರ್ಥಿ ಪರಿಷತ್ತಿನ ಉಪನಿರ್ದೇಶಕ ಪ್ರೊ. ಜಯವಂತ ನಾಯಕ್, ವಿದ್ಯಾರ್ಥಿ ಪರಿಷತ್ತಿನ ಅಧ್ಯಕ್ಷ ಸಾತ್ವಿಕ್, ಕಾರ್ಯದರ್ಶಿ ಕೀರ್ತನ್, ಸಹಕಾರ್ಯದರ್ಶಿ ನಂದಿತಾ ಎಸ್., ಲಲಿತಕಲಾ ಸಂಘದ ಕಾರ್ಯದರ್ಶಿ ಪೂಜಾ ಶೆಟ್ಟಿ, ಸಹಕಾರ್ಯದರ್ಶಿ ಅನನ್ಯಾ ಸೇರಿದಂತೆ ಹಳೆ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು, ಕಾಲೇಜಿನ ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.









