Friday, April 24, 2026
ಜಿಲ್ಲೆಬೆಳಗಾವಿಸಂತಾಪಸುದ್ದಿ

ಕಾಗವಾಡದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಹಿರಿಯ ಪುತ್ರಿ ಅನಾರೋಗ್ಯದಿಂದ ನಿಧನ-ಕಹಳೆ ನ್ಯೂಸ್

ಬೆಳಗಾವಿ ಜಿಲ್ಲೆಯ ಕಾಗವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರ ಹಿರಿಯ ಪುತ್ರಿ ಕೃತಿಕಾ ಭರಮಗೌಡ ಕಾಗೆ (37) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ (ಮಾ.01) ಕೊನೆಯುಸಿರೆಳೆದಿದ್ದಾರೆ.

ಕೃತಿಕಾ ಅವರು ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಆರೋಗ್ಯದಲ್ಲಿ ಏರುಪೇರು ಉಂಟಾದ್ದರಿಂದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸಿದೇ ಕೃತಿಕಾ ಮೃತಪಟ್ಟಿದ್ದಾರೆ. ಅವರ ಸ್ವಗ್ರಾಮವಾದ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರದಲ್ಲಿ ಇಂದು ಅಂತ್ಯಕ್ರಿಯೆ ನೆರವೇರಲಿದೆ.