Sunday, March 8, 2026
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ನೇತ್ರಾವತಿ ನದಿಗೆ ಜಿಗಿದು, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ರಕ್ಷಣೆ–ಕಹಳೆ ನ್ಯೂಸ್

ಬಂಟ್ವಾಳ: ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಜಿಗಿದಿದ್ದು, ಅವರನ್ನು ರಕ್ಷಿಸಲಾದ ಘಟನೆ ಮಾ. 4ರ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಬೆಂಗಳೂರಿನ ಕತ್ರಿಗುಪ್ಪೆ ಮುಖ್ಯ ರಸ್ತೆ ನಿವಾಸಿ ವೆಂಕಟಯ್ಯ ಎಂಬವರ ಪುತ್ರ ಶಂಕರಯ್ಯ (50) ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಶಂಕರಯ್ಯ ಈ ಉದ್ದೇಶಕ್ಕಾಗಿಯೇ ಬೆಂಗಳೂರಿನಿಂದ ಬಂಟ್ವಾಳಕ್ಕೆ ಬಂದಿದ್ದು, ಸಾಯಲು ಯತ್ನಿಸಿದ್ದರು ಎನ್ನಲಾಗಿದೆ.

ಜಾಹೀರಾತು
ಜಾಹೀರಾತು

ಮಾಹಿತಿ ಪಡೆದ ಕೂಡಲೇ ಕಾರ್ಯಾಚರಣೆ ನಡೆಸಿದ ಸಿದ್ದೀಕ್ ಎಂ.ಕೆ.ರೋಡ್, ಶಂಕರಯ್ಯ ಅವರನ್ನು ಸುರಕ್ಷಿತವಾಗಿ ದಡಕ್ಕೆ ಕರೆತಂದರು. ಉಪವಾಸವಿದ್ದ ಸಂದರ್ಭ ನಡೆಸಿದ ರಕ್ಷಣಾ ಕಾರ್ಯಕ್ಕೆ ಸಾರ್ವಜನಿಕರು ಅಭಿನಂದಿಸಿದ್ದಾರೆ.

ಆತ್ಮಹತ್ಯೆ ಯತ್ನಕ್ಕೆ ವೈಯಕ್ತಿಕ ಸಮಸ್ಯೆಯೇ ಕಾರಣ ಎಂದು ತಿಳಿದು ಬಂದಿದೆ. ನಂತರ ಆತನನ್ನು ಪೊಲೀಸರಿಗೆ ಹಸ್ತಾಂತರಿಸಲಾಯಿತು.

ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.