Saturday, March 14, 2026
ಜಿಲ್ಲೆರಾಜ್ಯಸುದ್ದಿ

ಪ್ರವಾಸಿಗರ ಮೇಲೆ ಹಲ್ಲೆ ಕೇಸ್​; ನಾಪತ್ತೆಯಾಗಿದ್ದ ಯುವಕ ಶವವಾಗಿ ಪತ್ತೆ-ಕಹಳೆ ನ್ಯೂಸ್

ಗಂಗಾವತಿ: ತಾಲ್ಲೂಕಿನ ಪ್ರವಾಸಿ ತಾಣದಲ್ಲಿ ಪ್ರವಾಸಿಗರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓಡಿಶಾ ಮೂಲದ ಬಿಬಾಶ್​ (26) ಎಂಬುವವರ ಮೃತದೇಹ ಶನಿವಾರ (ಮಾರ್ಚ್ 08) ಬೆಳಗ್ಗೆ ಪತ್ತೆಯಾಗಿದೆ.

ಗಂಗಾವತಿ ತಾಲ್ಲೂಕಿನ ಸಾಣಾಪುರ ಕೆರೆ ಬಳಿ ಇರುವ ಜಂಗ್ಲಿಗೆ ತೆರಳುವ ಮಾರ್ಗದಲ್ಲಿ ಗುರುವಾರ (ಮಾರ್ಚ್ 06) ಪ್ರವಾಸಿಗರ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಬಿಬಾಶ್ ನಾಪತ್ತೆಯಾಗಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ತೀವ್ರ ಹುಡುಕಾಟ ಬಳಿಕ ಇಂದು (ಮಾರ್ಚ್ 08) ಬೆಳಗ್ಗೆ ಅವರ ಮೃತದೇಹ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ಜಾಹೀರಾತು
ಜಾಹೀರಾತು

ತುಂಗಾಭದ್ರ ಎಡದಂಡೆ ಕಾಲುವೆ ಪಕ್ಕ ಇಸ್ರೇಲ್, ಅಮೆರಿಕ, ಒಡಿಶಾ, ಮಹಾರಾಷ್ಟ್ರ ಮತ್ತು ಸ್ಥಳೀಯ ಹೋಂ ಸ್ಟೇನ ಒಡತಿಯೊಬ್ಬರು ಗಿಟಾರ್ ಬಾರಿಸುತ್ತ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು. ಈ ವೇಳೆ ದುಷ್ಕರ್ಮಿಗಳು ಇವರ ಮೇಲೆ ಹಲ್ಲೆ ಮಾಡಿ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

ಗುಂಪಿನಲ್ಲಿದ್ದ ಬಿಬಾಶ್ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳು ಕಾಲುವೆಗೆ ತಳ್ಳಿ ಪರಾರಿಯಾಗಿದ್ದರು. ತೀವ್ರ ಹುಡುಕಾಟದ ನಂತರ ಮಲ್ಲಾಪುರ ಪವರ್​ಹೌಡಸ್​ ಗೇಟ್ ಬಳಿ ಓಡಿಶಾ ಮೂಲದ ಯುವಕ ಬಿಬಾಶ್​ನ ಶವ ಪತ್ತೆಯಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಡಾ. ರಾಮ್, ಆರೋಪಿಗಳ ಪತ್ತೆಗೆ ಆರು ತಂಡಗಳನ್ನು ರಚಿಸಲಾಗಿದ್ದು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಗಲಾಟೆಯಲ್ಲಿ ಗಾಯಗೊಂಡಿರುವವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಮೃತಪಟ್ಟ ಬಿಬಾಶ್ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ. ಇಸ್ರೇಲ್ ಮತ್ತು ಸ್ಥಳೀಯ ಮಹಿಳೆಯರ ವೈದ್ಯಕೀಯ ಪರೀಕ್ಷೆ ಮಾಡಿದ್ದು ವರದಿ ಬರಬೇಕಾಗಿದೆ ಎಂದು ತಿಳಿಸಿದ್ದಾರೆ.