ವಿಕಲಚೇತನರಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿದ: ಶಾಸಕ ಕಿರಣ್ ಕೊಡ್ಗಿ -ಕಹಳೆ ನ್ಯೂಸ್

ಕುಂದಾಪುರ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಲ 10 ಜನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ಕುಂದಾಪುರದ ವಿಕಲಚೇತನರ ಇಲಾಖೆಯ ಆವರಣದಲ್ಲಿ ಆಯೋಜಿಸಿದ್ದು ಕುಂದಾಪುರ ವಿಧಾನಸಭಾ ಕ್ಷೇತ್ರದ *ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಕೀಲಿಕೈ ಹಸ್ತಾಂತರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಪುರಸಭಾ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ.ವಿ,ಪುರಸಭಾ ಸದಸ್ಯರಾದ ಸಂತೋಷ್ ಶೆಟ್ಟಿ, ದೇವಕಿ ಸಣ್ಣಯ್ಯ, ಪುರಸಭಾ ಮಾಜಿ ಸದಸ್ಯರಾದ
ರಾಜೇಶ್ ಕಾವೇರಿ,ರವಿರಾಜ್ ಖಾರ್ವಿ ಶಾಸಕರ ಆಪ್ತ ಸಹಾಯಕ ಮಹಿಮ ಶೆಟ್ಟಿ,, ಹಾಗೆ ವಿವಿಧ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನ
ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಯೋಜನಾ ಸಹಾಯಕರಾದ ಶಿವಾಜಿ ಇವರು ಸ್ವಾಗತಿಸಿ ವಂದಿಸಿದರು.














