ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಮುಳಿಯ ಜ್ಞಾನವಿಕಾಸದ ವಾರ್ಷಿಕೋತ್ಸವ-ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಕಾರ್ಯಕ್ಷೇತ್ರದ ಕಲ್ಪವೃಕ್ಷ ಜ್ಞಾನವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಕೇಂದ್ರದ ಸದಸ್ಯರಾದ ವರದಲಕ್ಷ್ಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೇಂದ್ರದ ಸದಸ್ಯರು ಅನಿಸಿಕೆ ಹೇಳಿದರು. ತಾಲೂಕಿನ ಮಾನ್ಯ ಯೋಜನಾಧಿಕಾರಿಯವರು ಜ್ಞಾನವಿಕಾಸ ಕಾರ್ಯಕ್ರಮ ಗಳ ಬಗ್ಗೆ ವಾತ್ಸಲ್ಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕೇಂದ್ರದ ಸದಸ್ಯರಿಗೆ ಆಟೋಟ ನಡೆಸಿ ಬಹುಮಾನ ವಿತರಣೆ ಮಾಡಲಾಯಿತು. ಈ ಸಂಧರ್ಭ ಕೇಂದ್ರ ದ ಸಂಯೋಜಕಿ ಶಾಲಿನಿ ಶೆಟ್ಟಿ, ತಾಲ್ಲೂಕು ಜ್ಞಾನವಿಕಾಸ ಸಮನ್ವಯಧಿಕಾರಿ, ಸೇವಾಪ್ರತಿನಿಧಿ ಉಪಸ್ಥಿತರಿದ್ದರು. ಕೇಂದ್ರದ ಸದಸ್ಯರು ಸಾಂಸ್ಕೃತಿ ಕಾರ್ಯಕ್ರಮ ನೀಡಿದರು.














