Saturday, March 7, 2026
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶಿಕ್ಷಕ ಕೃಷ್ಣ ಭಟ್ಟರಿಗೆ ಢಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾ. 6ರಂದು ನಿವೃತ್ತ ಶಿಕ್ಷಕ ಪಂಜ ಸಮೀಪದ ಕೂತ್ಕುಂಜ ಗ್ರಾಮದ ಸಂಪ ನಿವಾಸಿ ಕೃಷ್ಣ ಭಟ್‌ (75) ಅವರಿಗೆ ಢಿಕ್ಕಿ ಹೊಡೆದು ಅವರ ಸಾವಿಗೆ ಕಾರಣವಾಗಿದ್ದು ವಾಹನವನ್ನು ಪೊಲೀಸರು ಗುರುತಿಸಿದ್ದಾರೆ.

ಪೊಲೀಸರು ಸ್ಥಳೀಯ ಸಿಸಿ ಕೆಮರಾಗಳಲ್ಲಿನ ದೃಶ್ಯಗಳನ್ನು ಪರಿಶೀಲನೆ ಮಾಡಿದಾಗ ಕೆಮ್ಮಿಂಜೆ ಗ್ರಾಮದ ಕಾಪಿಕಾಡು ನಿವಾಸಿ ಮಹಮ್ಮದ್‌ ಫಯಾಜ್‌ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಢಿಕ್ಕಿ ಹೊಡೆದು ಪರಾರಿಯಾಗುತ್ತಿರುವ ದೃಶ್ಯ ದಾಖಲಾಗಿರುವುದು ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿನ್ನೆಲೆಯಲ್ಲಿ ಆತನ ರಿಕ್ಷಾವನ್ನು ಸಂಚಾರ ಠಾಣೆ ಪೊಲೀಸ್‌ ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು