Saturday, March 14, 2026
ಜಿಲ್ಲೆಸುದ್ದಿ

ರಸ್ತೆ ದಾಟುತ್ತಿದ್ದ ಮಹಿಳೆಗೆ ಸಾರಿಗೆ ಬಸ್ ಡಿಕ್ಕಿ – ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ತುಮಕೂರು :  ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಸಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಜಮ್ಮ‌ (45) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತುಮಕೂರಿನ ಬಸ್ ಸ್ಟಾಂಡ್‌ನಿಂದ ಕಡೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಗರದ ಟೌನ್‌ಹಾಲ್ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಡೂರು ಡಿಪೋಗೆ ಸೇರಿದ್ದ ಬಸ್ ಇದಾಗಿದ್ದು, ಟೌನ್ ಹಾಲ್ ಬಳಿ ತಿರುವು ಪಡೆಯುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಂಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು