Friday, April 24, 2026
ಉಡುಪಿಶಿಕ್ಷಣಸುದ್ದಿ

ಕಾರ್ಕಳ ಶಾಸಕ ಸುನೀಲ್ ಕುಮಾರ್ ಪುತ್ರಿ ಪ್ರೇರಣಾಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.97 ಅಂಕ ; ಶಹಬ್ಬಾಸ್ ಮಗಳೇ.. ಎಂದ ಸುನಿಲ್..!- ಕಹಳೆ ನ್ಯೂಸ್

ಉಡುಪಿ: ಕಾರ್ಕಳದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಅವರ ಮಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 97 ಅಂಕದೊಂದಿಗೆ ಪಾಸಾಗಿದ್ದಾರೆ. ಈ ವಿಚಾರವನ್ನು ಸುನೀಲ್ ಕುಮಾರ್ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಮಗಳ ಸಾಧನೆಯ ಬಗ್ಗೆ ವಿವರವಾಗಿ ಬರೆದುಕೊಂಡ ಸುನೀಲ್ ಕುಮಾರ್ ಕೊನೆಯಲ್ಲಿ ಪುಸ್ತಕದ ಪಾಠದಷ್ಟೇ ಜೀವನ ಪಾಠ ಕೂಡಾ ಮುಕ್ಯವಾಗಿದ್ದು, ಆ ಸವಾಲನ್ನು ಅರ್ಥ ಮಾಡಿಕೊಳ್ಳೂವುದು ನಿಜವಾದ ಭವಿಷ್ಯ ಎಂದು ಸಲಹೆ ನೀಡಿದ್ದಾರೆ.

“ಮಗಳೇ ಓದಿಯಾಯ್ತಾ ಎಂದು ಪ್ರಶ್ನಿಸಿದಾಗಲೆಲ್ಲ, ‘ಒಳ್ಳೆ ಮಾರ್ಕ್ಸ್ ತೆಗೆದರೆ ಆಯ್ತಲ್ವಾ ಈಗ ಕಿರಿಕಿರಿ ಮಾಡಬೇಡಿ’ ಎಂದು ಹುಸಿಕೋಪ ಪ್ರದರ್ಶಿಸುತ್ತಿದ್ದಳು ನನ್ನ ಮುದ್ದಿನ ಮಗಳು ಪ್ರೇರಣಾ. ಈಗ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಶೇ.97 ರಷ್ಟು ಅಂಕ ಪಡೆದು ಉತ್ತೀರ್ಣಳಾಗಿದ್ದಾಳೆ”. ‌ಪರೀಕ್ಷೆಯೆಂದರೆ ಮಕ್ಕಳಿಗಿಂತ ಹೆತ್ತವರಿಗೆ ಕಾಳಜಿ ಹೆಚ್ಚು. ಆದರೆ ನಾವೆಂದೂ ಅಂಕಗಳಿಕೆಯ ಒತ್ತಡವನ್ನು ಅವಳ ಮೇಲೆ ಹೇರಿರಲಿಲ್ಲ. ಆದರೆ, ತನ್ನ ಜವಾಬ್ದಾರಿಯನ್ನು ಅರಿತು ಪರಿಶ್ರಮದಿಂದ ಓದಿದಳು. ಜ್ಞಾನಸುಧಾದ ಉಪನ್ಯಾಸಕರ ತಂಡ ಸೂಕ್ತ ಮಾರ್ಗದರ್ಶನ ಮಾಡಿದ್ದನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಲೇಬೇಕು. ಒಬ್ಬ ವಿಧೇಯ ವಿದ್ಯಾರ್ಥಿನಿಯಾಗಿ ಓದು ಹಾಗೂ ಮುಂದಿನ ಗುರಿಯೆಡೆಗಿನ ನಿನ್ನ ಸ್ಪಷ್ಟತೆಯ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ ಎಂದು ಬರೆದುಕೊಂಡು ತಮ್ಮ ಮಗಳ ಸಾಧನೆಯನ್ನು ಹೊಗಳಿದ್ದಾರೆ. ಈ ಪೋಸ್ಟ್ ಗೆ ಸಾಕಷ್ಟು ಜನ ಪ್ರತಿಕ್ರಿಯೆ ಕೂಡಾ ನೀಡಿದ್ದಾರೆ.