Recent Posts

Saturday, April 25, 2026
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಕಾರು : ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಪುತ್ತೂರಿನ ಯುವಕರನ್ನು ವಶಕ್ಕೆ ಪಡೆದ ಪೊಲೀಸರು …!!!!!- ಕಹಳೆ ನ್ಯೂಸ್

ದೇವರಕೊಲ್ಲಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿದ್ದು ಈ ವೇಳೆ ಕಾರನ್ನು ಎತ್ತಿ ಸರಿ ಪಡಿಸಲು ಹೋದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೆಟ್ ಇದ್ದ ಘಟನೆಯ ಬಗ್ಗೆ ಪ್ರಕರಣ ಬಯಲಿಗೆ ಬಂದಿದೆ.

ಏ 12 ರಂದು ಸಂಜೆ ಪಿರಿಯಾಪಟ್ಟಣದಿಂದ ಮಡಿಕೇರಿ ಮಾರ್ಗವಾಗಿ ಪುತ್ತೂರಿಗೆ ತೆರಳುತ್ತಿದ್ದ ಕಾರು ದೇವರಕೊಲ್ಲಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭ ನೆರವಿಗೆ ಧಾವಿಸಿ ಬಂದ ಸ್ಥಳೀಯರಿಗೆ ಕಾರಿನಲ್ಲಿ ಗಾಂಜಾ ಪ್ಯಾಕೇಟ್ ಗಳು ಪತ್ತೆಯಾಗಿದ್ದು ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದಿದ್ದು ವಿಚಾರಣೆ ನಡೆಸಿದಾಗ ಕಾರಿನಲ್ಲಿದ್ದವರು ಪುತ್ತೂರು ನಿವಾಸಿಗಳಾಗಿದ್ದು ಅವರ ಹೆಸರುಗಳು ಫಜ್ಜುದ್ದೀನ್, ಮುಷ್ಕಾಕ್, ಜಾಬಿ‌ರ್ ಎಂದು ತಿಳಿದು ಬಂದಿದೆ. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ಅಲ್ಲದೆ ಕಾರಿನ ಲ್ಲಿದ್ದ ಗಾಂಜಾ ಪ್ಯಾಕೇಟ್ ಗಳನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.